ಬೆಂಗಳೂರು:
ಬಿಬಿಎಂಪಿ ಸಾರ್ವಜನಿಕರ ಮೇಲೆ ಕಸ ತೆರಿಗೆ ಮತ್ತು ಇತರ ತೆರಿಗಳನ್ನು ವಿರೊಧಿಸಿ ಗುರುವಾರ ಕಾಂಗ್ರೆಸ್‌ನಿಂದ ಬಿಬಿಎಂಪಿ ಚಲೊ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರಿನ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಬಿಬಿಎಂಪಿ ಸದಸ್ಯರು, ಮಾಜಿ ಸದಸ್ಯರು, ಬೆಂಗಳೂರು ಮುಖಂಡರ ಸಭೆ ನಡೆಸಿದ್ದೇವೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದೇವೆ. ಈಗಾಗಲೇ ಬಿಬಿಎಂಪಿಗೆ 243 ವಾರ್ಡ್ ಮಾಡಲಾಗಿದೆ. ಬಿಬಿಎಂಪಿ ಚುನಾವಣೆ ಬೇಗ ನಡೆಸಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ಬಿಜೆಪಿಯವರು ಬಿಬಿಎಂಪಿಯಲ್ಲಿ 8500 ಕೋಟಿ ಸಾಲ ಹೊರಿಸಿದ್ದರು. ಟಿಡಿಆರ್ ಹಗರಣ ಮಾಡಿ ಹೋಗಿದ್ದರು. ಈಗ ಜನರ ಮೇಲೆ ಒಂದೊಂದೇ ತೆರಿಗೆ ಹಾಕುತ್ತಿದ್ದಾರೆ. ಕೋವಿಡ್ ನಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಹೈದ್ರಾಬಾದ್‌ನಲ್ಲಿ ಶೇ 50 ರಷ್ಟು ತೆರಿಗೆ ಕಡಿಮೆ ಮಾಡಲಾಗಿದೆ. ಇಲ್ಲೂ ಅದೇ ರೀತಿ ತೆರಿಗೆ ಕಡಿತ ಮಾಡಬೇಕು. ಮನೆ ಕಟ್ಟುವವರಿಗೆ ತೀವ್ರ ತೊಂದರೆಯಾಗುತ್ತಿದೆ. ಕಸ ಹಾಕುವವರ ಮೇಲೂ ತೊಂದರೆಯಾಗಿದೆ. ಇದರ ವಿರುದ್ದ ಬಿಬಿಎಂಪಿ ಚಲೊ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. (UNI)