ಬೆಂಗಳೂರು:
ಹಲಸೂರು ಕೆರೆಯಲ್ಲಿ ಛಠ್ ಪೂಜೆಗೆ ಸಿದ್ಧತೆ ಕೈಗೊಳ್ಳಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿ. 19-11-2023 ಹಾಗೂ 20-11-2023ರಂದು “ಛಠ್ ಪೂಜೆ” – ಸೂರ್ಯದೇವರ ಆರಾಧನೆ ಕಾರ್ಯಕ್ರಮದ ಸಲುವಾಗಿ ಹಲಸೂರು ಕೆರೆ, ಗಣಪತಿ ವಿಸರ್ಜನೆ ಮಾಡುವ ಕಲ್ಯಾಣಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ ಎಂದು ಪಾಲಿಕೆ ಹೇಳಿದೆ.
ಸದರಿ “ಛಠ್ ಪೂಜೆ”ಯಲ್ಲಿ ಭಾಗವಹಿಸುವ ಸಾರ್ವಜನಿಕರು ಹಲಸೂರು ಕೆರೆಯ ಉತ್ತರ ದಿಕ್ಕಿನಲ್ಲಿರುವ, ಅಣ್ಣಸ್ವಾಮಿ ಮೊದಲಿಯಾರ್ ರಸ್ತೆಯ (ಕಾರಾ ಕೆಫೆ ರೆಸ್ಟೋರೆಂಟ್ ಮುಂಭಾಗದ) ಮುಖ್ಯ ದ್ವಾರದ ಮೂಲಕವೇ ಬಂದು ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಮಾತ್ರವೇ “ಛಠ್, ಪೂಜೆಯನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಸದರಿ ಪೂಜೆಯಲ್ಲಿ ಭಾಗವಹಿಸುವ ಸಾರ್ವಜನಿಕರು ಯಾವುದೇ ರೀತಿಯ ಪ್ಲಾಸ್ಟಿಕ್ ಪೇಪರ್ ಮುಂತಾದ ವಿಷಯುಕ್ತ ವಸ್ತುಗಳನ್ನು ಕೆರೆಯ ಅಂಗಳಕ್ಕೆ ತರಬಾರದೆಂದು ಸೂಚಿಸಲಾಗಿದೆ ಹಾಗೂ ಹಲಸೂರು ಕೆರೆಯ ಬೇರೆ ದಿಕ್ಕಿನ ದ್ವಾರಗಳು ಮುಚ್ಚಿರುತ್ತದೆ ಎಂಬುದಾಗಿ ತಿಳಿಸಲಾಗಿದೆ. ಪೂರ್ವ ವಲಯದ ಬೇರೆ ಯಾವುದೇ ಸ್ಥಳದಲ್ಲಿ “ಛಠ್ ಪೂಜೆಗೆ ವ್ಯವಸ್ಥೆ ಕಲ್ಪಿಸಿರುವುದಿಲ್ಲವೆಂದು ಪೂರ್ವ ವಲಯ ಆಯುಕ್ತರಾದ ಶ್ರೀಮತಿ ಆರ್.ಸ್ನೇಹಲ್, ಭಾ.ಆ.ಸೇ* ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.