ಬೆಂಗಳೂರು:
2021ನೇ ವರ್ಷದ ಆಗಸ್ಟ್ ಹಾಗೂ ಸೆಪ್ಟೆಂಬರ್ ಮಾಹೆಯಲ್ಲಿ ಮೊಹರಂ/ವರಮಹಾಲಕ್ಷ್ಮೀ ವ್ರತ, ಶ್ರೀ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದುರ್ಗಾ ಪೂಜೆ ಸೇರಿದಂತೆ ಇನ್ನಿತರೆ ಹಬ್ಬಗಳು ಬರುತ್ತಿದ್ದು, ಈ ವೇಳೆ ಮಾರುಕಟ್ಟೆ ಪ್ರದೇಶಗಳಲ್ಲಿ ಜನದಟ್ಟಣೆ ತಡೆಯುವ ಉದ್ದೇಶದಿಂದ ಹಲವು ಕಟ್ಟುನಿಟ್ಟಿನ ನಿರ್ಭಂಧಗಳನ್ನು ವಿಧಿಸಲಾಗುತ್ತಿದೆ.
Also Read: BBMP to tighten festival-time Covid vigil on markets
ಅದರಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಮಾರುಕಟ್ಟೆಗಳಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ವಿವಿಧ ಹಂತಗಳಲ್ಲಿ ಕ್ರಮ ಜರುಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ. ಈ ಪೈಕಿ ಮಾರುಕಟ್ಟೆಗಳಲ್ಲಿ ಕೆಳಕಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ.
ಮಾರುಕಟ್ಟೆಗಳಲ್ಲಿ ಅನುಸರಿಸಬೇಕಾದ ಕ್ರಮಗಳು:
• ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು(Covid Appropriate Behaviour) ಉತ್ತೇಜಿಸಲು ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದು ಹಾಗೂ ಕೋವಿಡ್-19 ಮುಂಜಾಗ್ರತಾ ಕ್ರಮಗಳ ಬಗ್ಗೆ ಪಾಲಿಕೆಯ ಆರೋಗ್ಯ ವೈದ್ಯಾಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದು ವಾಹನ ಬಳಸಿಕೊಂಡು ಹಬ್ಬದ ಹಿಂದಿನ ದಿನ ಹಾಗೂ ಹಬ್ಬದ ದಿನ ಕೋವಿಡ್-19 ಸೊಂಕು ಮುಂಜಾಗ್ರತಾ ಕ್ರಮಗಳ ಬಗ್ಗೆ ಕೇಂದ್ರ ಕಛೇರಿಯಿಂದ ನೀಡಲಾಗಿರುವ ಸಂದೇಶ / ಸೂಚನೆಗಳನ್ನು ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಮತ್ತು ವರ್ತಕರಿಗೆ ಅರಿವು ಮೂಡಿಸುವುದು.
• ಮುಖ್ಯ ಮಾರ್ಷಲ್‌ರವರು ಈಗಾಗಲೇ ಪಾಲಿಕೆಯ ಎಂಟು ವಲಯ ಮಟ್ಟದಲ್ಲಿ ಮಾರ್ಷಲ್‌ಗಳಿಗೆ ನಿಯೋಜಿಸಿರುವ ಗಸ್ತು ವಾಹನಗಳನ್ನು ಬಳಸಿಕೊಂಡು ಹಬ್ಬದ ಹಿಂದಿನ ದಿನ ಹಾಗೂ ಹಬ್ಬದ ದಿನ ಕೋವಿಡ್-19 ಸೊಂಕು ಮುಂಜಾಗ್ರತಾ ಕ್ರಮಗಳ ಬಗ್ಗೆ ಕೇಂದ್ರ ಕಛೇರಿಯಿಂದ ನೀಡಲಾಗಿರುವ ಸಂದೇಶ / ಸೂಚನೆಗಳನ್ನು ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಮತ್ತು ವರ್ತಕರಿಗೆ ಅರಿವು ಮೂಡಿಸುವುದರ ಬಗ್ಗೆ ಕ್ರಮವಹಿಸುವುದು.
• ಮಾಸ್ಕ್ ಧರಿಸುವ ಕ್ರಮವು ಕೋವಿಡ್-19 ತಡೆಗಟ್ಟುವ ಅತ್ಯಂತ ಪ್ರಮುಖ ಕ್ರಮವಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಮಾರುಕಟ್ಟೆಗಳಲ್ಲಿ ಮಾಸ್ಕ್ ಧರಿಸದಿರುವವರಿಗೆ 250 ರೂ. ದಂಡವನ್ನು ಸಾರ್ವಜನಿಕರಿಗೆ ಮತ್ತು ವರ್ತಕರಿಗೆ ವಿಧಿಸುವುದನ್ನು ಕಡ್ಡಾಯವಾಗಿ ಜಾರಿಗೊಳಿಸುವುದು.
• ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಮಾರ್ಷಲ್‌ಗಳು ಹಾಗೂ ಹಿರಿಯ ಆರೋಗ್ಯ ಪರಿವೀಕ್ಷಕರುಗಳು / ಕಿರಿಯ ಆರೋಗ್ಯ ಪರಿವೀಕ್ಷಕರುಗಳು ಅಗತ್ಯ ಕ್ರಮವಹಿಸುವುದು ಹಾಗೂ ಸಾಮಾಜಿಕ ಅಂತರದ ನಿಯಮ ಉಲ್ಲಂಘಿಸುವ ವರ್ತಕರಿಗೆ ಮತ್ತು ಸಾರ್ವಜನಿಕರಿಗೆ 250 ರೂ. ದಂಡವನ್ನು ವಿಧಿಸುವುದು.
• ಅಂಗಡಿಗಳು, ರೆಸ್ಟೋರೆಂಟ್‌ಗಳು ಮತ್ತು ಮಾಲ್‌ಗಳ ಮಾಲೀಕರು ತಾವು ಸೇರಿದಂತೆ ತಮ್ಮ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್-19 ಕನಿಷ್ಠ ಮೊದಲನೇ ಡೋಸ್ ಲಸಿಕೆ ಪಡೆದಿರುವುದರ ಬಗ್ಗೆ ಖಾತರಿಪಡಿಸಿಕೊಳ್ಳುವುದು.
• ಅಂಗಡಿಗಳು, ರೆಸ್ಟೋರೆಂಟ್‌ಗಳು ಮತ್ತು ಮಾಲ್‌ಗಳ ಮಾಲೀಕರುಗಳು ತಮ್ಮ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಗಮನಿಸುವುದು.
• ಮಾರ್ಷಲ್‌ಗಳು, ಹಿರಿಯ ಆರೋಗ್ಯ ಪರಿವೀಕ್ಷಕರು ಮತ್ತು ಕಿರಿಯ ಆರೋಗ್ಯ ಪರಿವೀಕ್ಷಕರುಗಳು ಅಂಗಡಿಗಳು, ರೆಸ್ಟೋರೆಂಟ್‌ಗಳು, ಮಾಲ್‌ಗಳು ಮತ್ತು ಮಾರುಕಟ್ಟೆ ಸ್ಥಳಗಳಲ್ಲಿ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತ್ತಿರುವ ಬಗ್ಗೆ ಅನಿರೀಕ್ಷಿತ ಭೇಟಿ ನೀಡಿ ಖಾತರಿಪಡಿಸಿಕೊಳ್ಳುವುದು. ನಿಗಧಿಪಡಿಸಿರುವ ಕರ್ಫ್ಯೂ ಸಮಯದಲ್ಲಿ ಎಲ್ಲಾ ವಾಣಿಜ್ಯ ಮಳಿಗೆಗಳನ್ನು ಮುಚ್ಚಿಸುವುದು ಮತ್ತು ಯಾವುದೇ ವ್ಯಕ್ತಿ / ಸಂಸ್ಥೆ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ದಂಡದ ಜೊತೆಗೆ ವಿಪತ್ತು ನಿರ್ವಹಣಾ ಕಾಯಿದೆ 2005 ರ ನಿಯಮಾವಳಿಯನ್ವಯ ಕ್ರಮ ಕೈಗೊಳ್ಳುವುದು.
ಮೇಲ್ಕಂಡ ಎಲ್ಲಾ ಅಂಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಮೇಲ್ವಿಚಾರಣೆ ಮಾಡಲು ವಲಯ ಜಂಟಿ ಆಯುಕ್ತರು / ಆರೋಗ್ಯಾಧಿಕಾರಿಗಳು ಮತ್ತು ಮುಖ್ಯ ಮಾರ್ಷಲ್‌ಗಳು ಅಗತ್ಯಕ್ರಮ ಕೈಗೊಳ್ಳುವಂತೆ ಮುಖ್ಯ ಆಯುಕ್ತರು ಗೌರವ್ ಗುಪ್ರ ರವರು ಸೂಚಿಸಿರುತ್ತಾರೆ.