Home ಬೆಂಗಳೂರು ನಗರ ಮತ್ತೆ 66 ಆಸ್ಪತ್ರೆಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ನೋಟಿಸ್‌

ಮತ್ತೆ 66 ಆಸ್ಪತ್ರೆಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ನೋಟಿಸ್‌

59
0

ಬೆಂಗಳೂರು:

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೆ ಹೆಚ್ಚಳವಾಗುತ್ತಿರುವುದರಿಂದ ನಗರದ ಎಲ್ಲ ಆಸ್ಪತ್ರೆಗಳು ತಮ್ಮಲ್ಲಿರುವ ಶೇ 50ರಷ್ಟು ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಿಡುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಈ ಆದೇಶ ಪಾಲಿಸಲು ಮೀನ ಮೇಷ ಎಣಿಸುತ್ತಿರುವ 66 ಆಸ್ಪತ್ರೆಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಕಾರಣ ಕೇಳಿ ಬುಧವಾರ ತುರ್ತು ನೋಟಿಸ್‌ ಜಾರಿಗೊಳಿಸಿದ್ದಾರೆ.

ಗೌರವ ಗುಪ್ತ ಅವರು ಸೋಮವಾರ ನಗರದ ವಿಕ್ರಂ ಆಸ್ಪತ್ರೆ, ಪೋರ್ಟಿಸ್ ಆಸ್ಪತ್ರೆ (ಕನ್ನಿಂಗ್ ಹ್ಯಾಂ ರಸ್ತೆ), ಆಸ್ಟರ್ ಸಿಎಂಐ ಆಸ್ಪತ್ರೆ, ಕೊಲಂಬಿಯಾ ಏಷಿಯಾ ಆಸ್ಪತ್ರೆ ಹಾಗೂ ಬ್ಯಾಪ್ಟಿಸ್ಟ್ ಆಸ್ಪತ್ರೆಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಆಸ್ಪತ್ರೆಗಳು ತಮ್ಮಲ್ಲಿರುವ ಹಾಸಿಗೆಗಳ ಬಗ್ಗೆ ಸಮರ್ಪಕವಾದ ಮಾಹಿತಿ ನೀಡದೇ ಇರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿತ್ತು. ಈ ಆಸ್ಪತ್ರೆಗಳಿಗೆ ಮುಖ್ಯ ಆಯುಕ್ತರು ಸ್ಥಳದಲ್ಲೇ ತುರ್ತು ನೋಟಿಸ್‌ ಜಾರಿ ಮಾಡಿದ್ದರು. ಶೇ‌ 50 ರಷ್ಟು ಹಾಸಿಗೆಗಳನ್ನು ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಒದಗಿಸದೇ ಹೋದರೆ, ಆಸ್ಪತ್ರೆಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

ಮುಖ್ಯ ಆಯುಕ್ತರ ನೋಟಿಸ್‌ಗೆ ಈ ಐದೂ ಆಸ್ಪತ್ರೆಗಳು ಉತ್ತರಿಸಿವೆ. ‘ನಾವು ಈಗ ಕೋವಿಡೇತರ ಕಾಯಿಲೆಯ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ. ಈ ಹಾಸಿಗೆಗಳು ಖಾಲಿ ಆದಂತೆಯೇ ಹಂತ ಹಂತವಾಗಿ ಶೇ. 50 ರಷ್ಟು ಹಾಸಿಗೆಗಳನ್ನು ಕೋವಿಡ್‌ ರೋಗಿಗಳ ಚಿಕಿತ್ಸೆಗೆ ನೀಡುತ್ತೇವೆ’ ಎಂದು ಮುಖ್ಯ ಆಯುಕ್ತರು ಪತ್ರ ಬರೆದು ಸಮಜಾಯಿಷಿ ನೀಡಿವೆ. ಈಗಾಗಲೇ ಹೆಚ್ಚುವರಿ ಹಾಸಿಗೆಗಳನ್ನು ಕೋವಿಡ್‌ ರೋಗಿಗಳ ಚಿಕಿತ್ಸೆಗೆ ನೀಡಲು ಪ್ರಾರಂಭಿಸಿವೆ’ ಎಂದು ಬಿಬಿಎಂಪಿ ತಿಳಿಸಿದೆ.

BBMP hospital notice1
BBMP hospital notice2
BBMP hospital notice3

LEAVE A REPLY

Please enter your comment!
Please enter your name here