Home ಬೆಂಗಳೂರು ನಗರ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ ಗಿರಿ ನಾಥ್ ಭೇಟಿ

ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ ಗಿರಿ ನಾಥ್ ಭೇಟಿ

12
0

ಬೆಂಗಳೂರು: ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್) ವತಿಯಿಂದ ಬಿಡದಿಯಲ್ಲಿ ಸ್ಥಾಪಿಸುತ್ತಿರುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಶೀಘ್ರ ಪರೀಕ್ಷಾರ್ಥವಾಗಿ ವಿದ್ಯುತ್ ಉತ್ಪಾದಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಸಂಬಂಧ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಾಪಿಸಲಾಗುತ್ತಿದ್ದು, ಪಾಲಿಕೆಯಿಂದ ತ್ಯಾಜ್ಯದ ವ್ಯವಸ್ಥೆಯನ್ನು ಮಾಡಬೇಕಿದೆ. ಈ ನಿಟ್ಟಿನಲ್ಲಿ ತ್ಯಾಜ್ಯವನ್ನು ಸರಿಯಾಗಿ ನೀಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

IMG 20240613 WA0279

ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನಂತರ ವಿದ್ಯುತ್ ಉತ್ಪಾದನೆಗಾಗಿ ಪರೀಕ್ಷಾರ್ಥವಾಗಿ ತ್ಯಾಜ್ಯದ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

11.5 ಮೆಗಾವಾಟ್ ವಿದ್ಯುತ್ ಉತ್ಪಾದನೆ: ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು 10 ಎಕರೆಯಲ್ಲಿ ಸ್ಥಾಪಿಸಲಾಗಿದ್ದು, ಒಟ್ಟು 260 ಕೋಟಿ ರೂ. ವೆಚ್ಚದಲ್ಲಿ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಿಸಲಾಗಿದೆ. ಪ್ರತಿನಿತ್ಯ 11.5 ಮೆಗಾವಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿದೆ.

ಪಾಲಿಕೆಯಿಂದ ತ್ಯಾಜ್ಯದ ವ್ಯವಸ್ಥೆ: ಪಾಲಿಕೆಯ ಸಂಸ್ಕರಣಾ ಘಟಕಗಳು, ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳಲ್ಲಿ ಸಂಗ್ರಹವಾಗುವ ಆರ್‌ಡಿಎಫ್ ಅನ್ನು ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ರವಾನಿಸಲಾಗುತ್ತದೆ.

IMG 20240613 WA0282

ಇಂಟಿಗ್ರೇಟೆಂಡ್ ಘನತ್ಯಾಜ್ಯ ನಿರ್ವಹಣೆಯ ವ್ಯವಸ್ಥೆಗಾಗಿ ಸ್ಥಳ ಪರಿಶೀಲನೆ: ಬೊಮ್ಮನಹಳ್ಳಿ ವಲಯ ಗೊಲ್ಲಹಳ್ಳಿ ವ್ಯಾಪ್ತಿಯಲ್ಲಿ ಸರ್ವೇ ಸಂಖ್ಯೆ 39ರಲ್ಲಿ ಲೋಕೋಪಯೋಗಿ ಇಲಾಖೆ ಒಡೆತನದ ಸುಮಾರು 170 ಎಕರೆ ಜಾಗವಿದ್ದು, ಆ ಜಾಗದಲ್ಲಿ ಇಂಟಿಗ್ರೇಟೆಂಡ್ ಘನತ್ಯಾಜ್ಯ ನಿರ್ವಹಣೆಯ ವ್ಯವಸ್ಥೆಗಾಗಿ ಸ್ಥಳ ಬಳಸಿಕೊಳ್ಳುವ ಸಲುವಾಗಿ ಇಂದು ಸ್ಥಳ ಪರಿಶೀಲನೆ ನಡೆಸಲಾಯಿತು.

ಲೋಕೋಪಯೋಗಿ ಇಲಾಖೆಯ ಜಾಗದಲ್ಲಿ ಸಮತಟ್ಟಾದ ಜಾಗ ಹಾಗೂ ಕ್ಯಾರಿ ಜಾಗ ಎಷ್ಟಿದೆ ಎಂಬುದನ್ನು ಪರಿಶೀಲಿಸಬೇಕು. ಜೊತೆಗೆ ಈ ಜಾಗವನ್ನು ಪಾಲಿಕೆಗೆ ಹಸ್ತಾಂತರ ಮಾಡಿಕೊಳ್ಳುವ ಸಂಬಂಧ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಕೂಡಲೆ ಪತ್ರ ಬರೆದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ, ಲೋಕೇಶ್, ಕಾರ್ಯಪಾಲಕ ಅಭಿಯಂತರರಾದ ಮಧುಸುಧನ್, ಕೆಪಿಟಿಸಿಎಲ್ ಮುಖ್ಯ ಅಭಿಯಂತರರಾದ ಎಸ್.ಆರ್ ಕಬಾಡೆ, ಬಿಬಿಎಂಪಿ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿ ಹಾಜರಿದ್ದರು.

LEAVE A REPLY

Please enter your comment!
Please enter your name here