Home ಬೆಂಗಳೂರು ನಗರ ಬಿಬಿಎಂ‍ಪಿ ಗುತ್ತಿಗೆದಾರ ಆತ್ಮಹತ್ಯೆ

ಬಿಬಿಎಂ‍ಪಿ ಗುತ್ತಿಗೆದಾರ ಆತ್ಮಹತ್ಯೆ

705
0

ಬೆಂಗಳೂರು:

ಬಿಬಿಎಂ‍ಪಿ ಗುತ್ತಿಗೆದಾರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಮಹಾಲಕ್ಷ್ಮೀ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೈಯಾಲಿಕಾವಲ್‌ ನಿವಾಸಿ ವನಿ ಕೃಷ್ಣಂರಾಜು (68) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ.ಮಹಾಲಕ್ಷ್ಮೀ ಬಡಾವಣೆಯಲ್ಲಿನ ಡಾ.ರಾಜಕುಮಾರ್ ಒಳಾಂಗಣ ಕ್ರೀಡಾಂಗಣದ ಬಳಿ ನಿರ್ಮಾಣ ಹಂತದ ಕಟ್ಟಡದ ಕೋಣೆಯೊಂದರಲ್ಲಿ ಬುಧವಾರ ಸಂಜೆ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವನಿ‌ಕೃಷ್ಣಂರಾಜು ಅವರುರಾಜಾಜಿನಗರ ಕಾಂಪ್ಲೆಕ್ಸ್ ಸೇರಿ ಹಲವು ಕಟ್ಟಡಗಳನ್ನು ನಿರ್ಮಿಸಿದ್ದು, ಕಟ್ಟಡ ನಿರ್ಮಾಣವೊಂದರ ಗುತ್ತಿಗೆ ಬಾಕಿ ಹಣ ನೀಡುವಂತೆ ಹಲವು ಬಾರಿ ಪಾಲಿಕೆಗೆ ಮನವಿ ಮಾಡಿದ್ದರು. ಆದರೆ, ಹಣ ಕೈಗೆ ಎಟುಕದಿರುವ ಹಿನ್ನೆಲೆಯಲ್ಲಿ ಇದರಿಂದ ಬೇಸತ್ತ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.ಸದ್ಯ ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆಯುಡಿಆರ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. UNI

LEAVE A REPLY

Please enter your comment!
Please enter your name here