
BBMP Elections: Committee to be formed under leadership of Transport Minister Ramalinga Reddy: Deputy Chief Minister DK Shivakumar
ಬೆಂಗಳೂರು:
ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಬಿಎಂಪಿ ಅಧಿಕಾರಿಗಳೊಂದಿಗೆ ಚೊಚ್ಚಲ ಸಭೆ ನಡೆಸಿದ ಬಳಿಕ ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಕಾನೂನು ಅಂಶಗಳ ಅಧ್ಯಯನ ಮಾಡಲು ಸಮಿತಿ ರಚನೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೋಮವಾರ ಹೇಳಿದರು.
ಬಿಬಿಎಂಪಿ ಅವಧಿಯು ಸೆಪ್ಟೆಂಬರ್ 2020 ರಂದು ಕೊನೆಗೊಂಡಿತು ಚುನಾವಣೆ ಎರಡೂವರೆ ವರ್ಷ ವಿಳಂಬವಾಗಿದೆ. 2007-10ರ ಅವಧಿಯಲ್ಲಿ ನ್ಯಾಯಾಲಯದ ನಿರ್ದೇಶನದ ಮೇರೆಗೆ 2010ರಲ್ಲಿ ಚುನಾವಣೆ ನಡೆದಾಗಲೂ ಇದೇ ಪರಿಸ್ಥಿತಿ ಉಂಟಾಗಿತ್ತು.
ಶಿವಕುಮಾರ್ ಅವರು ಬಿಬಿಎಂಪಿ ಚುನಾವಣೆ ನಡೆಸುವ ಕುರಿತು ಅಧ್ಯಯನ ಮಾಡಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಹೇಳಿದರು.