ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ & ರೆಸ್ಟೋರೆಂಟ್ ಗಳಿಗೆ ಸಂಬಂಧಿಸಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ದಿನಾಂಕ: 23-10-2023 ರಂದು ತಪಾಸಣೆ ನಡೆಸಲಾಗಿದ್ದು, ನ್ಯೂನ್ಯತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್ ಜಾರಿಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಿಸಲಾಗಿರುತ್ತದೆ.
ಪಾಲಿಕೆ ವ್ಯಾಪ್ತಿಯಲ್ಲಿ ಇಂದು 79 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 26 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ 05 ಉದ್ದಿಮೆಗಳನ್ನು ಮುಚ್ಚಲಾಗಿರುತ್ತದೆ. ಸದರಿ ವಿವರದ ಪ್ರತಿಯನ್ನು ಲಗತ್ತಿದೆ .