ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹ ಐ.ಪಿ.ಡಿ. ಸಾಲಪ್ಪ ರವರ 27ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು.
ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಐ.ಪಿ.ಡಿ. ಸಾಲಪ್ಪ ರವರ ಪ್ರತಿಮೆಗೆ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಮಾಡಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಹರೀಶ್ ಕುಮಾರ್, ಉಪ ಆಯುಕ್ತರಾದ ಮಂಜುನಾಥ್ ಸ್ವಾಮಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪೌರಕಾರ್ಮಿಕರ ಪಿತಾಮಹ ಎಂದೇ ಖ್ಯಾತರಾದ ಶ್ರೀ ಐ.ಪಿ.ಡಿ. ಸಾಲಪ್ಪ ಅವರ 27ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಬಿಬಿಎಂಪಿ ಕೇಂದ್ರ ಕಛೇರಿಯ ಆವರಣದಲ್ಲಿರುವ ಶ್ರೀ ಐ.ಪಿ.ಡಿ. ಸಾಲಪ್ಪ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.@CMofKarnataka @siddaramaiah @DKShivakumar @KarnatakaVarthe pic.twitter.com/4LW1WaReiK
— Tushar Giri Nath IAS (@BBMPCOMM) September 14, 2023