ಬಾಬುಸಾಬ್ ಪಾಳ್ಯದಲ್ಲಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಅವಶೇಷ ತೆರವು ವೇಳೆ ಮತ್ತೊಂದು ಮೃತದೇಹ ಪತ್ತೆ
ಬೆಂಗಳೂರು: ಬಾಬುಸಾಬ್ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆ ಬಿಬಿಎಂಪಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಬಿಬಿಎಂಪಿ ಹೊರಮಾವು ಉಪವಿಭಾಗದ ಎಇಇ ಕೆ.ವಿನಯ್ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. ಕಟ್ಟಡ ತೆರವಿಗೆ ಸ್ಥಿರೀಕರಣ ಆದೇಶ ಹೊರಡಿಸಿದ್ದರೂ ಎಇಇ ಕೆ.ವಿನಯ್ ನಿಗದಿತ ಅವಧಿಯೊಳಗೆ ಕ್ರಮಕೈಗೊಂಡಿಲ್ಲ. ಮೇಲ್ನೋಟಕ್ಕೆ 8 ಕಾರ್ಮಿಕರ ಸಾವಿಗೆ ಕಾರಣಕರ್ತರಾಗಿದ್ದಾರೆ. ಹೀಗಾಗಿ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
