Home ಬೆಂಗಳೂರು ನಗರ ಕೋವಿಡ್-19 ಪ್ರಕರಣಗಳ ಹೆಚ್ಚಳದ ಬಗ್ಗೆ ಬಿಬಿಎಂಪಿ ಅಲರ್ಟ್

ಕೋವಿಡ್-19 ಪ್ರಕರಣಗಳ ಹೆಚ್ಚಳದ ಬಗ್ಗೆ ಬಿಬಿಎಂಪಿ ಅಲರ್ಟ್

107
0
BBMP on Alert on spike in Covid-19 Cases
Advertisement
bengaluru

ಕೋವಿಡ್ ಪ್ರೋಟೋಕಾಲ್ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಕೆ

ರಾತ್ರಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ: ಬೆಂಗಳೂರು ಪೊಲೀಸ್ ಮುಖ್ಯಸ್ಥ ಕಮಲ್ ಪಂತ್

ಬೆಂಗಳೂರು:

ನಗರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಕೋವಿಡ್ -19 ಸೋಂಕುಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಪೊಲೀಸರ ಸಹಾಯದಿಂದ ಸರ್ಕಾರದ ಕ್ರಮಗಳನ್ನು ಜಾರಿಗೊಳಿಸಲು ನಾಗರಿಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯ ವರ್ಚುವಲ್ ಜಂಟಿ ಸಭೆಯನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಗುಪ್ತಾ, ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿದಿನ ಸರಾಸರಿ 150-200 ಕೋವಿಡ್ -19 ಪ್ರಕರಣಗಳು ದಾಖಲಾಗುತ್ತಿವೆ. ಆದಾಗ್ಯೂ, ಕಳೆದ 3 ದಿನಗಳಲ್ಲಿ, ಅಂಕಿಅಂಶವು 250 ಕ್ಕಿಂತ ಹೆಚ್ಚಿದೆ ಮತ್ತು ಈ ಪ್ರವೃತ್ತಿಯನ್ನು ತಡೆಯುವುದು ಅಗತ್ಯವಾಗಿದೆ.

ರಾಜ್ಯ ಸರ್ಕಾರ ಹೊರಡಿಸಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದರು. ರೆಸ್ಟೋರೆಂಟ್‌ಗಳು, ಪಬ್‌ಗಳು ಮತ್ತು ಕ್ಲಬ್‌ಗಳು 50% ಆಸನ ಸಾಮರ್ಥ್ಯದೊಂದಿಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿಸಬೇಕು. ಅಲ್ಲಿ ಕೆಲಸ ಮಾಡುವ ಸಿಬ್ಬಂದಿ RT-PCR ನೆಗೆಟಿವ್ ಸರ್ಟಿಫಿಕೇಟ್ ವನ್ನು ಹೊಂದಿರಬೇಕು, ಎರಡು ಬಾರಿ ಲಸಿಕೆಯನ್ನು ಹೊಂದಿರಬೇಕು ಮತ್ತು ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸಬೇಕು. ಗ್ರಾಹಕರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಗುಪ್ತಾ ಹೇಳಿದರು.

bengaluru bengaluru

ಹೊಸ ವರ್ಷಾಚರಣೆ ‘ಇಲ್ಲ’

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಹೊಸ ವರ್ಷದ ಆಚರಣೆಗಳು ನಡೆಯದಂತೆ ನೋಡಿಕೊಳ್ಳಬೇಕು ಮತ್ತು ಅದಕ್ಕೆ ಅನುಗುಣವಾಗಿ ಸಾರ್ವಜನಿಕ ಪ್ರಕಟಣೆಗಳನ್ನು ಮಾಡಬೇಕು ಎಂದು ಪೌರಾಯುಕ್ತರು ಕರೆ ನೀಡಿದರು.

ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸಲು ವಿಫಲರಾದ ಜನರ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್‌ಗಳು ಮತ್ತು ಪೇಯಿಂಗ್ ಗೆಸ್ಟ್ ಮಾಲೀಕರೊಂದಿಗೆ ಮತ್ತು ಹಾಸ್ಟೆಲ್‌ಗಳು ಮತ್ತು ಮಾರುಕಟ್ಟೆಗಳಲ್ಲಿ ಸಭೆಗಳನ್ನು ನಡೆಸುವ ಮೂಲಕ ಸರ್ಕಾರದ ನಿಯಮಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಕೆಲಸವನ್ನು ಗುಪ್ತಾ ತಮ್ಮ ತಂಡಕ್ಕೆ ವಹಿಸಿದರು.

Also Read: BBMP on alert over recent spike in Covid-19 cases

ನಗರದಲ್ಲಿ ರಾತ್ರಿ 10ರ ನಂತರ ಹೊಸ ವರ್ಷಾಚರಣೆಗೆ ಅವಕಾಶ ನೀಡಬಾರದು ಹಾಗೂ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಮಾತನಾಡಿ, “ಕೊವಿಡ್ ನಿಯಂತ್ರಿಸಲು ಜನರು ಮತ್ತು ನಿಯಮ ಜಾರಿ ಕುರಿತಂತೆ ಸಮತೋಲಿತ ವಿಧಾನ ಹೊಂದಿರಬೇಕು. ಪ್ರಸ್ತುತ ಸನ್ನಿವೇಶವು ಅತ್ಯಂತ ಕಾಳಜಿಯದಾಗಿದ್ದು, ನಿಯಮಗಳ ಜಾರಿಯು ಸುಸೂತ್ರವಾಗಿರಬೇಕು. ಎಲ್ಲರಿಗೂ ಹೊಸ ವರ್ಷದ ಶುಭಕಾಮನೆಗಳನ್ನು ಕೋರುತ್ತಾ, ಅತ್ಯಂತ ಕಾಳಜಿಯೊಂದಿಗೆ ಹೊಸ ವರ್ಷವನ್ನು ಉತ್ತಮ ರೀತಿಯಲ್ಲಿ ಆಚರಿಸೋಣ ಎಂದು ತಿಳಿಸಿದರು.

ಕೋವಿಡ್ -19 ಹರಡುವುದನ್ನು ನಿಯಂತ್ರಿಸಲು ನಗರದಲ್ಲಿ ರಾತ್ರಿ 10 ಗಂಟೆಯ ನಂತರ ರಾತ್ರಿ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ. ತ್ರಿಲೋಕ್ ಚಂದ್ರ, ಎಲ್ಲಾ ವಲಯ ಆಯುಕ್ತರು ಮತ್ತು ಜಂಟಿ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಮುರುಗನ್ ಮತ್ತು ಸೌಮೇಂದು ಮುಖರ್ಜಿ, ಉಪ ಪೊಲೀಸ್ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿ ಮತ್ತು ಎಲ್ಲಾ ವಲಯ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.


bengaluru

LEAVE A REPLY

Please enter your comment!
Please enter your name here