ಬೆಂಗಳೂರು:
ಕರ್ನಾಟಕ ಕರ್ಫ್ಯೂ ಹಿನ್ನೆಲೆಯಲ್ಲಿ ಬಿಬಿಎಂಪಿ ಬೆಂಗಳೂರಿನ ಜನರಿಗೆ ಅನುಕೂಲ ಮಾಡಿಕೊಡಲು ಆದೇಶವೊಂದನ್ನು ಹೊರಡಿಸಿದೆ. ಮೇ 31ರ ತನಕ ಆಸ್ತಿ ತೆರಿಗೆಯನ್ನು ಶೇ 5ರಷ್ಟು ರಿಯಾಯಿತಿ ದರದಲ್ಲಿ ಪಾವತಿ ಮಾಡಲು ಅವಕಾಶ ನೀಡಿದೆ.
ಶೇ 5ರಷ್ಟು ರಿಯಾಯಿತಿ ದರದಲ್ಲಿ ಆಸ್ತಿ ತೆರಿಗೆಯನ್ನು ಪಾವತಿ ಮಾಡಲು ಏಪ್ರಿಲ್ 30ರ ತನಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅವಕಾಶ ನೀಡಿತ್ತು. ಈಗ ತೆರಿಗೆ ಪಾವತಿ ಅವಧಿಯನ್ನು ಮೇ 31ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೊರೊನಾ ಹರಡದಂತೆ ತಡೆಯಲು ಕರ್ಫ್ಯೂ ಘೋಷಣೆ ಮಾಡಲಾಗಿದೆ.