Home ಬೆಂಗಳೂರು ನಗರ 3 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳು ಕೂಡ ಮಾಸ್ಕ್ ಧರಿಸಿರುವಂತೆ ಬಿಬಿಎಂಪಿ ಸಲಹೆ

3 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳು ಕೂಡ ಮಾಸ್ಕ್ ಧರಿಸಿರುವಂತೆ ಬಿಬಿಎಂಪಿ ಸಲಹೆ

29
0
Advertisement
bengaluru

ಬಿಬಿಎಂಪಿ ವ್ಯಾಪ್ತಿಯ ಅಪಾರ್ಟ್​ಮೆಂಟ್, ಕಾಂಪ್ಲೆಕ್ಸ್​ಗಳಿಗೆ ಕೊವಿಡ್19 ವಿಶೇಷ ಮಾರ್ಗಸೂಚಿ ಪ್ರಕಟ

ಬೆಂಗಳೂರು:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWA) ಮತ್ತು ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ ಗಳಲ್ಲಿನ ನಿರ್ವಹಣಾ ಸಮಿತಿಗಳಿಗೆ ಕೊವಿಡ್ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಅದರಂತೆ ಕೊವಿಡ್-19 ಅನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಅಡಿಯಲ್ಲಿ ಸಾಂಕ್ರಾಮಿಕ ರೋಗವೆಂದು ಸೂಚಿಸಲಾಗಿದೆ. ಈ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೆಕ್ಷನ್ 4ರ ಅಡಿಯಲ್ಲಿ ರೋಗದ ಹರಡುವಿಕೆಯನ್ನು ನಿಯಂತ್ರಿಸಲು ಜಾರಿಗೊಳಿಸುವ ಕ್ರಮಗಳನ್ನು ಕೈಗೊಳ್ಳಲು ಪಾಲಿಕೆಗೆ ಅಧಿಕಾರ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ಕಳೆದ 2 ವಾರಗಳಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಒಟ್ಟಿಗೆ ಕಂಡುಬಂದರೆ ಅದನ್ನು ಕ್ಲಸ್ಟರ್ ಎಂದು ಗುರುತಿಸಲಾಗುತ್ತಿದೆ. ಜೊತೆಗೆ 100 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗುತ್ತದೆ. ಈ ಪೈಕಿ ಸಕ್ರಿಯ ಕೆಂಟೈನ್ಮೆಂಟ್ ವಲಯಗಳ ಸಂಖ್ಯೆ 160 ದಾಟಿದ್ದು, (09.08.2021 ರಂತೆ), ಅದರಲ್ಲಿ ಸುಮಾರು ಶೇಕಡಾ 50 ರಷ್ಟು ಅಂದರೆ 79 ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್​ಗಳು ಕಂಟೈನ್ಮೆಂಟ್ ವಲಯಗಳಿವೆ.

Read Here: BBMP suggests Masks for Children Above 3 years

bengaluru bengaluru

ಈ ಸಂಬಂಧ ಅಪಾರ್ಟ್ಮೆಂಟ್ ಗಳಲ್ಲಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾದ ಅನುಷ್ಠಾನ ಮತ್ತು ಅನುಸರಣಾ ಚಟುವಟಿಕೆಗಳನ್ನು ಅನುಸರಿಸುವ ಸಲುವಾಗಿ ಹಲವು ಸುತ್ತೋಲೆ ಸೂಚನೆಗಳನ್ನು ನೀಡಲಾಗಿರುತ್ತದೆ. ಈಗಿರುವ ಸರ್ಕಾರಿ ಆದೇಶಗಳು ಮತ್ತು ಮಾರ್ಗಸೂಚಿಗಳ ಜೊತೆಗೆ ದಿನಾಂಕ ಆಗಸ್ಟ್ 12, 2021 ರಂದು ಪಾಲಿಕೆ ಹೊರಡಿಸಿರುವ ಮಾರ್ಗಸೂಚಿಯಲ್ಲಿನ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಎಂದು ಸೂಚಿಸಲಾಗಿದೆ.

ಅಪಾರ್ಟ್​ಮೆಂಟ್ ಅಥವಾ ಕಾಂಪ್ಲೆಕ್ಸ್​ಗಳ ಎಲ್ಲರೂ, ಅಲ್ಲಿಗೆ ಭೇಟಿ ನೀಡುವವರ ಉಷ್ಣಾಂಶ ಪರಿಶೀಲಿಸಬೇಕು. ಸ್ಯಾನಿಟೈಸೇಶನ್, ಮಾಸ್ಕ್ ಧರಿಸುವಿಕೆ ಕಡ್ಡಾಯ ಆಗಿರಬೇಕು. ಅಪಾರ್ಟ್​ಮೆಂಟ್​ನ ಹೊರತಾದವರು ಸ್ಥಳಕ್ಕೆ ಭೇಟಿ ಕೊಟ್ಟರೆ ಅವರ ಹೆಸರು ಮತ್ತು ಸಂಪರ್ಕ ಸಂಖ್ಯೆ ದಾಖಲಿಸಿರಬೇಕು.

ಹೊರರಾಜ್ಯಗಳಿಗೆ ಭೇಟಿ ನೀಡಿದವರು ಆರ್​ಟಿಪಿಸಿಆರ್ 72 ಗಂಟೆಗಳ ಒಳಗಿನ ನೆಗೆಟಿವ್ ಫಲಿತಾಂಶ ತಂದಿರಬೇಕು. ಇಲ್ಲವಾದಲ್ಲಿ ಬಂದಮೇಲೆ ಆರ್​ಟಿಪಿಸಿಆರ್ ಪರೀಕ್ಷೆ ನಡೆಸಬೇಕು ಹಾಗೂ ಅದರ ಫಲಿತಾಂಶ ಬರುವವರೆಗೆ ಹೋಮ್ ಕ್ವಾರಂಟೈನ್ ಆಗಿರಲೇಬೇಕು.

ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸ್ವಿಮ್ಮಿಂಗ್ ಪೂಲ್ ಮುಚ್ಚಿಯೇ ಇರುತ್ತದೆ. ಆದರೆ, ಜಿಮ್​ಗಳು ಶೇಕಡಾ 50ರಷ್ಟು ಜನರೊಂದಿಗೆ ಕಾರ್ಯನಿರ್ವಹಿಸಬಹುದು.

3 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳು ಕೂಡ ಮಾಸ್ಕ್ ಧರಿಸಿರುವಂತೆ ಹೆತ್ತವರು ಅಥವಾ ಪೋಷಕರು ನೋಡಿಕೊಳ್ಳಬೇಕು. ಮಕ್ಕಳ ಕುರಿತು ಹೆಚ್ಚಿನ ಕಾಳಜಿ ಅನಿವಾರ್ಯ.

ಜನ ಸೇರುವ, ಗುಂಪಾಗಿ ನಡೆಸುವ, ಸಾರ್ವಜನಿಕ ಅಥವಾ ಸಾಮೂಹಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಇರುವುದಿಲ್ಲ. ಮಕ್ಕಳ ಗುಂಪು ಚಟುವಟಿಕೆಗಳು, ತರಗತಿಗಳು ಕೂಡ ನಡೆಸುವುದು ಸೂಕ್ತವಲ್ಲ.

ಹೋಮ್ ಡೆಲಿವರಿ, ಕೊರಿಯರ್ ಇನ್ನಿತರ ಸೇವೆಗಳಿಗೆ, ಸೇವೆ ನೀಡುವವರು ಅಪಾರ್ಟ್​ಮೆಂಟ್​ನ ಹೊರಗಿನ ಗೇಟ್ ಅಥವಾ ಮುಖ್ಯ ಗೇಟ್ ವರೆಗೆ ಮಾತ್ರ ಬರುವಂತೆ ನೋಡಿಕೊಳ್ಳುವುದು.

ಔಷಧ, ಪ್ಲಂಬಿಂಗ್, ವಿದ್ಯುತ್, ಗ್ಯಾಸ್ ಇಂತಹ ಅವಶ್ಯಕ ಸೇವೆಗಳನ್ನು ಕೊರೊನಾ ಮಾರ್ಗಸೂಚಿ ಅನುಸರಿಸಿ ನಡೆಸಲು ಅವಕಾಶ ಇದೆ.


bengaluru

LEAVE A REPLY

Please enter your comment!
Please enter your name here