ಬೆಂಗಳೂರು:
ನಾಳೆಯಿಂದ 9ನೇ ತರಗತಿ ಶಾಲೆಗಳು ಹಾಗೂ ಪ್ರಥಮ ಪಿಯುಸಿ ಶಾಲೆಗಳು ಪ್ರಾರಂಭವಾಗುತ್ತಿದ್ದು, ಬಿಬಿಎಂಪಿಯ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಿಕೊಂಡು ಸುರಕ್ಷಿತವಾಗಿ ಶಾಲೆಗಳನ್ನು ನಡೆಸಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ರವರು ತಿಳಿಸಿದರು.
ಪಾಲಿಕೆಯ 33 ಪ್ರೌಢಶಾಲೆ ಹಾಗೂ 15 ಪಿಯು ಕಾಲೇಜುಗಳಿದ್ದು, ಈ ಪೈಕಿ ಈಗಾಗಲೇ ಶಾಲಾ-ಕಾಲುಜುಗಳಿಗೆ ಸೋಂಕು ನಿವಾರಕ ಸಿಂಪಡಣೆ ಮಾಡಲಾಗಿದೆ. ನಾಳೆ ಶಾಳೆಗೆ ಬರುವ ಮಕ್ಕಳು ಸಾಮಾಜಿಕ ಅಂತರ ಕಾಯ್ದುಕೊಂಡು, ಸಾನಿಟೈಸ್ ಮಾಡಿಕೊಂಡು ಶಾಲೆಗೆ ಬರಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶಿಕ್ಷಕರಿಗೆ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಲಾಗಿದೆ. ಶಿಕ್ಷಣ ಇಲಾಖೆ ಸೂಚಿಸಿರುವ ಕ್ರಮಗಳನ್ನೆಲ್ಲಾ ಪಾಲನೆ ಮಾಡಲಾಗುತ್ತದೆ ಎಂದರು.
ರಾಜ್ಯದಾದ್ಯಂತ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಮುಂದೆ ಬರುವ ಅನಾಹುತಗಳನ್ನು ತಡೆಯಬೇಕು. ಆದ್ದರಿಂದ ಎಲ್ಲಾ ಪೋಷಕರು ಮಕ್ಕಳನ್ನು ಆಸ್ಪತ್ರೆಗೆ ಕರೆತಂದು ಲಸಿಕೆ ಹಾಕಿಸಬೇಕು ಎಂದು ಮಾನ್ಯ ಕಂದಾಯ ಸಚಿವರು ತಿಳಿಸಿದರು.