Home ಬೆಂಗಳೂರು ನಗರ ಸ್ವಚ್ಛ ಸರ್ವೇಕ್ಷಣ್ ಅಭಿಯಾನ-2021ರ ಬಗ್ಗೆ ಜಾಗೃತಿ

ಸ್ವಚ್ಛ ಸರ್ವೇಕ್ಷಣ್ ಅಭಿಯಾನ-2021ರ ಬಗ್ಗೆ ಜಾಗೃತಿ

75
0

ಬೆಂಗಳೂರು:

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಅಂಗವಾಗಿ ಹಲಾವಾರು ಕಾರ್ಯಕ್ರಮಗಳನ್ನು ಆಯೋಜಿಸಿ ನಾಗರಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನಗರದ ಒರಾಯನ್ ಮಾಲ್ ಬಳಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಅಂಗವಾಗಿ ಆರೋಗ್ಯ ಶಿಬಿರ, ನಗರದ ಸ್ವಚ್ಛತೆ ಕಾಪಾಡುವ, ಕಾಂಪೋಸ್ಟಿಂಗ್ ಬಗ್ಗೆ ಅರಿವು ಮೂಡಿಸಲಾಯಿತು.

ನಗರದ ಸ್ವಚ್ಛತೆ ಕಾಪಾಡಲು ಶ್ರಮವಹಿಸಿ ಕೆಲಸ ಮಾಡುವ ಪೌರಕಾರ್ಮಿಕರು ಮತ್ತು ಆಶಾ ಕಾರ್ಯಕರ್ತರಿಗೆ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಪಾಲಿಕೆ ಅಧಿಕಾರಿಗಳು, ಪೌರಕಾರ್ಮಿಕರು, ಆಶಾ ಕಾರ್ಯಕರ್ತರಿಗೆ ಸೇರಿದಂತೆ ಸುಮಾರು 200 ಮಂದಿಗೆ ‘Swachhata She Champion’ ಅಭಿನಂದನಾ ‌ಪತ್ರಗಳನ್ನು ವಿತರಿಸಲಾಯಿತು.

ಮನೆಯಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ಕಾಂಪೋಸ್ಟ್ ಮಾಡಿ ಗೊಬ್ಬರ ತಯಾರಿಸುವ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಲಾಯಿತು. ಅಲ್ಲದೆ Stonesoup.in ಸಂಸ್ಥೆಯು Awareness About Sustainable Menstruation Cups ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಹಿಳೆಯರಿಗೆ ಉಚಿತವಾಗಿ ಕಪ್ಸ್ ಗಳನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here