Home ಬೆಂಗಳೂರು ನಗರ ಶುಕ್ರವಾರದ ಬೃಹತ್ ಲಸಿಕಾ ಅಭಿಯಾನದಲ್ಲಿ 5 ಲಕ್ಷ ಮಂದಿಗೆ ಲಸಿಕೆ ಹಾಕುವ ಗುರಿ: ಮುಖ್ಯ ಆಯುಕ್ತ...

ಶುಕ್ರವಾರದ ಬೃಹತ್ ಲಸಿಕಾ ಅಭಿಯಾನದಲ್ಲಿ 5 ಲಕ್ಷ ಮಂದಿಗೆ ಲಸಿಕೆ ಹಾಕುವ ಗುರಿ: ಮುಖ್ಯ ಆಯುಕ್ತ ಗೌರವ್ ಗುಪ್ತ

61
0
BBMP targets 5 lakh vaccinattion on Friday: Chief Commissioner Gaurav Gupta

ಬೆಂಗಳೂರು:

ರಾಜ್ಯಾದ್ಯಂತ ನಾಳೆ (ಶುಕ್ರವಾರ) ಬೃಹತ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ 5 ಲಕ್ಷ ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವಾರ್ಡ್ ನಲ್ಲೂ 1 ಅಥವಾ 2 ಸ್ಥಿರ ಸೈಟ್‌ಗಳು ಸೇರಿದಂತೆ ಕನಿಷ್ಠ 10 ಲಸಿಕಾ ಕೇಂದ್ರಗಳ ವ್ಯವಸ್ಥೆ ಮಾಡಿಕೊಂಡು ಲಸಿಕೆ ನೀಡಲಾಗುತ್ತಿದೆ. ಲಸಿಕಾ ಕೇಂದ್ರವಳಲ್ಲಿ ಲಸಿಕೆ ನೀಡಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಳಾಗಿದೆ. ಎನ್.ಜಿ.ಒ ಸಂಸ್ಥೆಗಳಿಂದ ಲಸಿಕೆ ಪಡೆದವರನ್ನು ಪ್ರರೇಪಿಸಿ ಲಸಿಕೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದರು.

ನಗರದಲ್ಲಿ ಹೆಚ್ಚು ಲಸಿಕೆ ನೀಡಲು 2,178 ಲಸಿಕಾ ಕೇಂದ್ರಗಳ ವ್ಯವಸ್ಥೆ ಮಾಡಿದ್ದು, 4 ಲಕ್ಷ ಕೋವಿಶೀಲ್ಡ್, 1 ಲಕ್ಷ ಕೋವ್ಯಾಕ್ಸಿನ್ ಲಸಿಕೆಯನ್ನು ಎಲ್ಲಾ ಲಸಿಕಾ ಕೇಂದ್ರಗಳಿಗೆ ವಿತರಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಕೂಡಾ ಲಸಿಕೆ ನೀಡುವ ವ್ಯವಸ್ಥೆ ಮಾಡಿಕೊಂಡಿದ್ದು, ಪಾಲಿಕೆಯಿಂದ ಲಸಿಕೆ ನೀಡಲಾಗುವುದು. ಆ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳು ಸಿಬ್ಬಂದಿಯನ್ನು ನಿಯೋಜಿಸಲಿದೆ‌. ನಗರದಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೆಳಗ್ಗೆ 8.00 ರಿಂದ ರಾತ್ರಿ 8.00 ಗಂಟೆಯವರೆಗೆ ಹಾಗೂ ಔಟ್ ರೀಚ್ ಸೆಷನಗಳಲ್ಲಿ ಬೆಳಗ್ಗೆ 8.00 ರಿಂದ ಸಂಜೆ 5.00 ಗಂಟೆಯವರೆಗೆ ಲಸಿಕೆ ನೀಡಲಾಗುವುದು ಎಂದು ಹೇಳಿದರು.

ನಗರದಲ್ಲಿ ಹೋಟೆಲ್ ಕಾರ್ಮಿಕರು, ಕೊಳಗೇರಿ ಪ್ರದೇಶಗಳು, ಲಸಿಕೆ ಪಡೆಯದ ಪ್ರದೇಶಗಳು, ಬೀದಿ ಬದಿ ವ್ಯಾಪಾರಿಗಳು, ವಿವಿಧ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕಟ್ಟಡ ನಿರ್ಮಾಣ ಮಾಡುವ ಸಿಬ್ಬಂದಿ ಸೇರಿದಂತೆ ಇನ್ನಿತರೆ ಸ್ಥಳಗಲ್ಲಿ‌ ವಿಶೇಷ ಕ್ಯಾಂಪ್ ಗಳ ವ್ಯವಸ್ಥೆ ಮಾಡಿಕೊಂಡು ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

ಮಲ್ಲೇಶ್ವರ ಕೋದಂಡರಾಮಪುರ ವ್ಯಾಪ್ತಿಯಲ್ಲಿ ನಾಳೆ (ಶುಕ್ರವಾರ) ಬೃಹತ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಲಾಗುತ್ತಿದೆ. ನಗರದಲ್ಲಿ ಈಗಾಗಲೇ ಶೇ. 80 ಕ್ಕಿಂತ ಹೆಚ್ಚು ಮಂದಿ ಲಸಿಕೆ ಪಡೆದಿದ್ದು, ಸುಮಾರು 19 ಲಕ್ಷ ಮಂದಿ ಮೊದಲನೇ ಡೋಸ್ ಲಸಿಕೆ ಪಡೆಯಬೇಕಿದ್ದು, ಮುಂದಿನ ಒಂದು ತಿಂಗಳಲ್ಲಿ ಎಲ್ಲರಿಗೂ ಲಸಿಕೆ ನೀಡಲು ಕ್ರಮವಹಸಿಲಾಗುವುದು ಎಂದರು.

ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ದೃಡಪಟ್ಟ‌ 350 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ 32 ಮಂದಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ 25 ವ್ಯಾಕ್ಸಿನ್ ಪಡೆಯವರಾಗಿದ್ದು, 7 ಮಂದಿ ಮೊದಲ ಡೋಸ್ ಪಡೆವರಾಗಿದ್ದಾರೆ. ಎರಡೂ ಡೋಸ್ ಪಡೆದವ್ಯಾರು ಆಸ್ಪತ್ರೆಯಲ್ಲಿ‌ ದಾಖಲಾಗಿಲ್ಲ ಎಂದು ತಿಳಿಸಿದರು.

Also Read: Mega plan to vaccinate 5 lakh people on Friday: BBMP chief

LEAVE A REPLY

Please enter your comment!
Please enter your name here