ಬೆಂಗಳೂರು:
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸುವ ಸಲುವಾಗಿ ವಲಯವಾರು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ಸುಸ್ತಿದಾರರಿಗೆ ನೋಟಿಸ್ ಜಾರಿಗೊಳಿಸಿ ತ್ವರಿತಗತಿಯಲ್ಲಿ ತೆರಿಗೆ ಸಂಗ್ರಹಿಸುವಂತೆ ಮುಖ್ಯ ಆಯುಕ್ತ ಗೌರವ್ ಗುಪ್ತ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಂದಾಯ ಅಧಿಕಾರಿಗಳು, ಸಹಾಯ ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹಿಸುವ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಈ ಸಂಬಂಧ ಆಯಾ ವಾರ್ಡ್ ವ್ಯಾಪ್ತಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಗೆ ನೋಟೀಸ್ ನೀಡಿ ತ್ವರಿತವಾಗಿ ತೆರಿಗೆ ಸಂಗ್ರಹಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
Held a meeting on property tax in BBMP limits with officials concerned, today. Have instructed them to issue notice to the defaulters & collect the tax. Zonal Commissioners, Joint Commissioners, Deputy Commissioner & Revenue Department, Revenue Officials were present.
— Gaurav Gupta (@BBMPCOMM) September 23, 2021
ಪ್ರಸಕ್ತ ಸಾಲಿನಲ್ಲಿ 4,000 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ನಿನ್ನೆಯರೆಗೆ 2,141.51(ಶೇ.53) ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಎಲ್ಲಾ ಅಧಿಕಾರಿಗಳು ಗುರಿಯನ್ನು ತಲುಪಲು ಶ್ರಮವಹಿಸಿ ಕಾರ್ಯನಿರ್ವಹಿಸಬೇಕು. ಹಲವಾರು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳ ಪಟ್ಟಿ ಅನ್ವಯ ಕಂದಾಯ ಅಧಿಕಾರಿಗಳು ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಅಧಿಕ ತೆರಿಗೆ ಬಾಕಿ ಉಳಿಸಿಕೊಂಡ ಸುಸ್ತಿದಾರರ ಪಟ್ಟಿಯ ಅನುಸಾರ ನೋಟೀಸ್ ಜಾರಿಗೊಳಿಸಿ ಬಾಕಿ ವಸೂಲಾತಿ ಮಾಡಬೇಕು ಎಂದರು.
Also Read: BBMP has met only half of property tax target of Rs 4,000 crore