Home ಬೆಂಗಳೂರು ನಗರ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಅಭಿಯಾನ

ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಅಭಿಯಾನ

23
0
Advertisement
bengaluru

ಬೆಂಗಳೂರು:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಕುಷ್ಠರೋಗ ನಿರ್ಮೂಲನೆ ಮಾಡುವ ಸಲುವಾಗಿ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಅಭಿಯಾನವನ್ನು ಹಮ್ಮಿಕೊಂಡಿದ್ದು, ಆಡಳಿತಗಾರ ಗೌರವ್ ಗುಪ್ತಾ ಹಾಗೂ ಆಯುಕ್ತ ಎನ್ ಮಂಜುನಾಥ ಪ್ರಸಾದ್ ರವರು ಅಭಿಯಾನಕ್ಕೆ ಚಾಲನೆ ನೀಡಿದರು.

ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಷ್ಠರೋಗ ನಿರ್ಮೂಲನೆ ಮಾಡುವ ಕಾರ್ಯಮವನ್ನು ರೂಪಿಸಿಕೊಂಡಿದ್ದು, ಜನವರಿ 30 ರಿಂದ ಫೆಬ್ರವರಿ 13ರವರೆಗೆ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಶೀರ್ಷಿಕೆಯಡಿ ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಸಾದ್ ರವರು ತಿಳಿಸಿದರು‌.

WhatsApp Image 2021 01 30 at 10.03.12

ಸರ್ವೋದಯ ದಿನಾಚರಣೆ ಮುಗಿದ ಬಳಿಕ ಮಾತನಾಡಿದ ಆಯುಕ್ತರು, 2016-17 ಸಾಲಿನಿಂದ ಪಾಲಿಕೆ ವ್ಯಾಪ್ತಿಯಲ್ಲಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮವು ಅನುಷ್ಠಾನಗೊಂಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ 198 ವಾರ್ಡ್‌ಗಳಿದ್ದು, 141 ಆರೋಗ್ಯ ಕೇಂದ್ರಗಳು, 5 ಸಾರ್ವಜನಿಕ ಆಸ್ಪತ್ರೆಗಳು, 6 ವೈದ್ಯಕೀಯ ಕಾಲೇಜು/ಆಸ್ಪತ್ರೆಗಳು, 2 ಸ್ವಯಂಸೇವಾ ಸಂಸ್ಥೆಗಳು ಸದರಿ ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

bengaluru bengaluru

ಕುಷ್ಠರೋಗ ನಿರ್ಮೂಲನಕ್ಕೆ ಮುಂದಾಗಿರುವ ಪಾಲಿಕೆಯ ಆರೋಗ್ಯ ಇಲಾಖೆಯು ಜನವರಿ 30 ರಿಂದ ಫೆಬ್ರವರಿ 13 ರ ವರೆಗೆ “ಕುಷ್ಠರೋಗ ವಿರುದ್ಧ ಅಂತಿಮ ಹೋರಾಟ” ಶೀರ್ಷಿಕೆಯಡಿ ಜಾಗೃತಿ ಆಂದೋಲನ ಹಮ್ಮಿಕೊಂಡಿದೆ‌. ಈ ಸಂದರ್ಭ ಎಲ್ಲಾ ವೈದ್ಯರು ಹಾಗೂ ಪಾಲಿಕೆಯ ಸಿಬ್ಬಂದಿ ಕುಷ್ಠರೋಗ ಮುಕ್ತ ಪಾಲಿಕೆ ನಿರ್ಮಾಣದ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ. ಆಂದೋಲನದ ಮೂಲಕ ಜನರನ್ನು ಸಂಪರ್ಕಿಸಿ, ರೋಗದ ಲಕ್ಷಣ ಹಾಗೂ ಚಿಕಿತ್ಸೆ ಕುರಿತು ಅರಿವು ಮೂಡಿಸಲಾಗುತ್ತೆ. ಇದೇ ವೇಳೆ ಕುಷ್ಠರೋಗ ಪತ್ತೆ ಕಾರ್ಯ ನಡೆಸಲಾಗುವುದು. ಕುಷ್ಠರೋಗದ ಲಕ್ಷಣಗಳು ಕಂಡುಬಂದರೆ ಕೂಡಲೆ ಎಲ್ಲಾ ಪಾಲಿಕೆ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.


bengaluru

LEAVE A REPLY

Please enter your comment!
Please enter your name here