BBMP's forest unit distributing Free saplings to public
ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಅರಣ್ಯ ಘಟಕದಿಂದ ಸಾರ್ವಜನಿಕರು, ಸ್ವಯಂ ಸೇವಾ ಸಂಘ ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಗುತ್ತಿದೆ.
ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಬೆಂಗಳೂರು ನಗರವನ್ನು ಹಸಿರೀಕರಣ ಮಾಡಲು ವಿವಿಧ ವಲಯಗಳ ವ್ಯಾಪ್ತಿಯ ಸಸ್ಯ ಕ್ಷೇತ್ರಗಳಲ್ಲಿ “8*12” ಅಳತೆಯ ವಿವಿಧ ಜಾತಿಯ ಸಸಿಗಳು ಲಭ್ಯವಿದ್ದು, ಅವುಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ.
ಬೊಮ್ಮನಹಳ್ಳಿ, ಯಲಹಂಕ, ರಾಜರಾಜೇಶ್ವರಿ ನಗರ ಹಾಗೂ ಮಹದೇವಪುರ ವಲಯಗಳಲ್ಲಿ ಬಿಬಿಎಂಪಿ ಅರಣ್ಯ ಘಟಕ ವತಿಯಿಂದ ವಿತರಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಆಸಕ್ತರು ಅಧಿಕಾರಿಗಳಿಗೆ ಮನವಿ ಸಲ್ಲಿಸಬಹುದಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾರ್ವಜನಿಕ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
