ಬೆಂಗಳೂರು;- ಲಿಂಗಾಯತರಿಗೆ ಪೋಸ್ಟಿಂಗ್ ಕೊಡಬೇಡಿ ಅಂತ ಸಿಎಂ ಕಡೆಯಿಂದಲೇ ಕರೆ ಹೋಗ್ತಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಲಿಂಗಾಯತರ ಕಡೆಗಣನೆ ಆಗುತ್ತಿರುವುದು ಶೇ. ನೂರಕ್ಕೆ ನೂರು ಸತ್ಯ. ಈ ಕುರಿತ ಶಾಮನೂರು ಶಿವಶಂಕರಪ್ಪ ಹೇಳಿಕೆ ನಿಜ. ಯಾರಾದರೂ ಲಿಂಗಾಯತರು ಪೋಸ್ಟಿಂಗ್‌ಗೆ ಬಂದರೆ ಕೊಡಬೇಡಿ ಅಂತ ಸಿಎಂ ಕಡೆಯಿಂದ ಸಚಿವರಿಗೆ ಕರೆ ಹೋಗುತ್ತಿದೆ ಎಂದರು.
ಇನ್ನೂ ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಆದರೆ, ಈವರೆಗೆ ರೈತರಿಗೆ ಒಂದು ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಕೊಟ್ಟಿಲ್ಲ. ಬಿಜೆಪಿ ಸರ್ಕಾರವು ಕೇಂದ್ರ ಸರ್ಕಾರ ಪರಿಹಾರಕ್ಕೆ ಕಾಯದೆ ಪರಿಹಾರ ಕೊಟ್ಟಿತ್ತು. ಹೀಗಾಗಿ ಈ ಕೂಡಲೇ ಕಾಂಗ್ರೆಸ್ ಸರ್ಕಾರ ರೈತರಿಗೆ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
The post BC Patil; ಕಾಂಗ್ರೆಸ್‌ನಲ್ಲಿ ಲಿಂಗಾಯತರ ಕಡೆಗಣನೆ 100℅ ಸತ್ಯ -ಬಿ.ಸಿ.ಪಾಟೀಲ್ appeared first on Ain Live News.