
ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ವಿಶ್ವ ಹಿಂದು ಪರಿಷತ್ (VHP) ಹಾಗೂ ಭಜರಂಗದಳದ ಕಾರ್ಯಕರ್ತರು ಅಕ್ರಮ ಗೋಮಾಂಸ ಸಾಗಾಟ ಆರೋಪ ಮಾಡಿ ಒಂದು ಲಾರಿಗೆ ಬೆಂಕಿ ಹಚ್ಚಿದರು.
ಮಾಹಿತಿಯ ಪ್ರಕಾರ, ಕುಡಚಿಯಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ನಾಲ್ಕು ಲಾರಿಗಳಲ್ಲಿ KA-71-2045 ಲಾರಿಯನ್ನು ಕಾರ್ಯಕರ್ತರು ತಡೆದು ಪರಿಶೀಲನೆ ನಡೆಸಿದರು. ಅಲ್ಲಿ ಬೃಹತ್ ಪ್ರಮಾಣದ ಗೋಮಾಂಸ ಪತ್ತೆಯಾಗಿದೆ ಎಂದು ಆರೋಪ ಮಾಡಿದರು. ಆಕ್ರೋಶದಿಂದ ಕಾರ್ಯಕರ್ತರು ಮಾಂಸದ ಸಮೇತ ವಾಹನಕ್ಕೆ ಬೆಂಕಿ ಹಚ್ಚಿದರು.
Also Read: Belagavi Tense After VHP, Bajrang Dal Activists Torch Truck Over Alleged Beef Smuggling
ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಅಥಣಿ ಡಿವೈಎಸ್ಪಿ ಹಾಗೂ ಕಾಗವಾಡ ಪೊಲೀಸರು ಸ್ಥಳಕ್ಕಾಗಮಿಸಿದರು. ಲಾರಿಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಪ್ರಾರಂಭಿಸಿದರು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಘಟನೆಯ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.