ಅನಿಲ್ ಲಾಡ್, ಅಂಜಲಿ ಲಿಂಬಾಳ್ಕರ್ ಹೆಸರು ಪರಿಶೀಲನೆಯಲ್ಲಿ
ಬೆಂಗಳೂರು:
ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಸಿದ್ಧತೆ ನಡೆಸಿದ್ದಾರೆ.
ಮಾಜಿ ಗೃಹ ಸಚಿವ, ಕಾಂಗ್ರೆಸ್ ಮುಖಂಡ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಹೆಸರು ಶಿಫಾರಸ್ಸುಗೊಂಡಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಎಐಸಿಸಿಗೆ ಸತೀಶ್ ಜಾರಕಿಹೊಳಿ ಹೆಸರು ಕಳಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಮಾಜಿ ಸಂಸದ ಅನಿಲ್ ಲಾಡ್ ಮತ್ತು ಶಾಸಕಿ ಅಂಜಲಿ ಲಿಂಬಾಳ್ಕರ್ ಅವರ ಹೆಸರು ಸಹ ರೇಸ್ ನಲ್ಲಿ ಕೇಳಿ ಬಂದಿದೆ.
ಬೆಳಗಾವಿ ಭಾಗದಲ್ಲಿ ಸತೀಶ್ ಜಾರಕಿಹೊಳಿ ಪ್ರಬಲರಾಗಿದ್ದು ಇವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಮಾಜಿ ಶಾಸಕ ಫಿರೋಜ್ ಸೇಠ್ ಸಮ್ಮತಿ ಸೂಚಿಸಿದ್ದು, ಉಪ ಚುನಾವಣೆಗೆ ಕಾಂಗ್ರೆಸ್ ನಿಂದ ಪ್ರಬಲ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಹೊರ ಹೊಮ್ಮಿದ್ದಾರೆ.