Home ರಾಜಕೀಯ Belagavi: ಪ್ರಧಾನಿ ಮೋದಿ ಸಮಾವೇಶಕ್ಕೆ ಜನ ಸೇರಿಸಲು ಹಣ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ಶಾಸಕ ರಾಜೀವ್...

Belagavi: ಪ್ರಧಾನಿ ಮೋದಿ ಸಮಾವೇಶಕ್ಕೆ ಜನ ಸೇರಿಸಲು ಹಣ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ಶಾಸಕ ರಾಜೀವ್ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು

77
0
Kudachi MLA P Rajeev is seen felicitation Prime Minister Narendra Modi during his campaign on April 29, 2023.
ಕುಡಚಿ ಶಾಸಕ ಪಿ ರಾಜೀವ್ ಅವರು ಏಪ್ರಿಲ್ 29, 2023 ರಂದು ತಮ್ಮ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.

ಬೆಳಗಾವಿ:

ಕುಡಚಿ ಮತಕ್ಷೇತ್ರದಲ್ಲಿ ಏ.29 ರಂದು ನಡೆದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ರಾಜೀವ ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿರುತ್ತದೆ.

ಮಾನ್ಯ ಪ್ರಧಾನಮಂತ್ರಿಗಳು ಭಾಗವಹಿಸಿದ್ದ ಬಿಜೆಪಿ ಪಕ್ಷದ ಬಹಿರಂಗ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ಧೇಶದಿಂದ ಮುಗಳಖೋಡ ಪಟ್ಟಣದ ಬಳಿ ಏ.29 ರಂದು ಹಣ ಹಂಚಿಕೆ ಮಾಡಿ ಆಮಿಷ ತೋರಿಸಲಾಗಿದೆ ಎಂದು ಖಾಸಗಿ ಟಿವಿ ವರದಿಯ ಕುರಿತು ಸಾಮಾಜಿಕ ಜಾಲತಾಣದಲ್ಲಿನ ಪ್ರತಿಕ್ರಿಯೆ ಆಧರಿಸಿ ದೂರು ನೀಡಲಾಗಿರುತ್ತದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಹಾಗೂ ಮುಗಳಖೋಡದ ಹಾಲಪ್ಪ ಹನಮಂತ ಶೇಗುಣಸಿ ಎಂಬುವರ ವಿರುದ್ಧ ಸರಕಾರಿ ಅಧಿಕಾರಿ ಅಭಿಷೇಕ್ ಪಾಂಡೆ ಅವರು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಭಾನುವಾರ (ಏ.30) ದೂರು ನೀಡಿರುತ್ತಾರೆ.

ಸುದ್ದಿ ಮೂಲ: ಕರ್ನಾಟಕ ವಾರ್ತೆ

LEAVE A REPLY

Please enter your comment!
Please enter your name here