ಬೆಳಗಾವಿ:
ರಾಜ್ಯೋತ್ಸವ ಮೆರವಣಿಗೆ ಬಗ್ಗೆ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾದುತ್ತಿದ್ದರು.
ಕನ್ನಡ ರಾಜ್ಯೋತ್ಸವಕ್ಕೆ ಅದ್ದೂರಿ ಮೆರವಣಿಗೆಗೆ ಅವಕಾಶ ನೀಡಲು ಕನ್ನಡಪರ ಹೋರಾಟಗಾರರು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಮೆರವಣಿಗೆಗಳ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಹಾನಗಲ್ ನಲ್ಲಿ ಮೂರು ದಿನಗಳ ಪ್ರಚಾರ ಕಾರ್ಯಕ್ಕಾಗಿ ಬೆಳಗಾವಿಗೆ ಆಗಮಿಸಿದ್ದು, ಅಕ್ಟೋಬರ್ 23 ರಂದು ಕಿತ್ತೂರು ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪುನಃ ಬೆಳಗಾವಿಗೆ ಬರುವುದಾಗಿ ಹೇಳಿದರು. ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಬಹುಮತದಿಂದ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು.