ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೊದಲ ಬಾರಿಗೆ ಶಾಸಕರಾಗಿದ್ದಾಗ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ಅಶೋಕ‌್ ಮಣ್ಣಿಕೇರಿ
ಬೆಳಗಾವಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೊದಲ ಬಾರಿಗೆ ಶಾಸಕರಾಗಿದ್ದಾಗ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ಅಶೋಕ‌್ ಮಣ್ಣಿಕೇರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಎಸಿ ಕಚೇರಿಯಲ್ಲಿ ಗ್ರೇಡ್ 2 ತಹಶಿಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ ಮತ್ತು ಆಕೆಯ ಸಹೋದರ ಸ್ಯಾಮ್ಯುಯೆಲ್ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದೆ. ಮೃತ ಅಶೋಕ್ ಕುಟುಂಬಸ್ಥರು ಈ ಬಗ್ಗೆ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಅಶೋಕ್ ಮಣ್ಣಿಕೇರಿ ಕುಟುಂಬ ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿತ್ತು, ತಡರಾತ್ರಿ ಹೃದಯಾಘಾತವಾಗಿದೆ ಎಂದು ಅಶೋಕ್ ಮಣ್ಣಿಕೇರಿ ಅವರನ್ನು ಪತ್ನಿ ಭೂಮಿ ಹಾಗೂ ಆಕೆಯ ಸಹೋದರ ಸ್ಯಾಮ್ಯುಯೆಲ್ ಅವರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದ್ರೆ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅಶೋಕ್ ಮಣ್ಣಿಕೇರಿ ಕೊನೆಯುಸಿರೆಳೆದಿದ್ದಾರೆ.
ನನ್ನ ಆಪ್ತ ಸಹಾಯಕರಾಗಿದ್ದ ಅಶೋಕ ಮಣ್ಣಿಕೇರಿಯವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ. ಅಪಾರ ಜ್ಞಾನ, ಅನುಭವವುಳ್ಳ ವ್ಯಕ್ತಿಯನ್ನು ಕಳೆದುಕೊಂಡಿರುವುದು ದೊಡ್ಡ ನಷ್ಟವೆನಿಸುತ್ತಿದೆ.
— Laxmi Hebbalkar (@laxmi_hebbalkar) June 29, 2023
ಈ ಸಮಯದಲ್ಲಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಿ, ಅವರ ಕುಟುಂಬಸ್ಥರಿಗೆ ಭಗವಂತ ನೋವು ಸಹಿಸುವ ಶಕ್ತಿಯನ್ನು ಕರುಣಿಸಲೆಂದು… pic.twitter.com/kUiVnhWPuk
ನನ್ನ ಆಪ್ತ ಸಹಾಯಕರಾಗಿದ್ದ ಅಶೋಕ ಮಣ್ಣಿಕೇರಿಯವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ. ಅಪಾರ ಜ್ಞಾನ, ಅನುಭವವುಳ್ಳ ವ್ಯಕ್ತಿಯನ್ನು ಕಳೆದುಕೊಂಡಿರುವುದು ದೊಡ್ಡ ನಷ್ಟವೆನಿಸುತ್ತಿದೆ. ಈ ಸಮಯದಲ್ಲಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಿ, ಅವರ ಕುಟುಂಬಸ್ಥರಿಗೆ ಭಗವಂತ ನೋವು ಸಹಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. ಈ ಸಮಯದಲ್ಲಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಿ, ಅವರ ಕುಟುಂಬಸ್ಥರಿಗೆ ಭಗವಂತ ನೋವು ಸಹಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.