Home ಬೆಳಗಾವಿ Belagavi | ಚಿಂಚಲಿ ಬಳಿ ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

Belagavi | ಚಿಂಚಲಿ ಬಳಿ ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

25
0
Belgaum | Mother commits suicide by jumping into river with three children near Chinchali

ಬೆಳಗಾವಿ : ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಬಳಿ ನಡೆದಿದೆ.

ಮೃತರನ್ನು ತಾಯಿ ಶಾರದಾ ಢಾಲೆ (38) ಮತ್ತು ಮಕ್ಕಳಾದ ಅನುಶಾ ಢಾಲೆ(10), ಅಮೃತಾ ಢಾಲೆ(14) ಆದರ್ಶ ಢಾಲೆ (8) ಎಂದು ಗುರುತಿಸಲಾಗಿದೆ.

ಪತಿ ಅಶೋಕ ಡಾಲೆ(45) ಪ್ರತಿ ನಿತ್ಯ ಕುಡಿದು ಬಂದು ಪತ್ನಿ ಹಾಗೂ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದ ಶಾರದಾ ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ್ದಾರೆ. 1 ಮಗುವನ್ನು ಕೂಡಲೇ ರಕ್ಷಣೆ ಮಾಡಿದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ತಿಳಿಸಿದ್ದಾರೆ. ಅಶೋಕ ಡಾಲೆಯನ್ನು ಕುಡಚಿ ಪೊಲೀಸರ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here