Belagavi Winter session for 10 days from December 4 | ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ
ಬೆಂಗಳೂರು:
ಡಿಸೆಂಬರ್ 4ರಿಂದ 15ರ ವರೆಗೆ ಒಟ್ಟು ಹತ್ತು ದಿನಗಳ ಕಾಲ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
ಡಿ.4ರ ಬೆಳಗ್ಗೆ 11ಗಂಟೆಗೆ ಸದನ ಸಮಾವೇಶಗೊಳ್ಳಲಿದೆ. ಶನಿವಾರ ಮತ್ತು ರವಿವಾರ ಹೊರತುಪಡಿಸಿ ಒಟ್ಟು 10 ದಿನಗಳ ಕಾಲ ಅಧಿವೇಶನ ಕಲಾಪ ನಡೆಯಲಿದೆ. ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನ ನಡೆಯಲಿದೆ.
ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಜರುಗಲಿದೆ ಎಂದು ವಿಶಾಲಾಕ್ಷಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
