Belagavi Woman stripped and assault case: Handed over to CID | ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಿಐಡಿಗೆ ಹಸ್ತಾಂತರ
ಬೆಳಗಾವಿ:
ಇಲ್ಲಿನ ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ ಸಂಬಂಧ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಲಾಗಿದೆ.
ಪ್ರಕರಣ ಸಂಬಂಧ ಈಗಾಗಲೇ ಸ್ಥಳೀಯ ಠಾಣಾಧಿಕಾರಿಗಳು ಬೆಂಗಳೂರಿನ ಸಿಐಡಿ ಕಚೇರಿಗೆ ತೆರಳಿ ಪ್ರಕರಣ ಕುರಿತು ಕಡತಗಳನ್ನು ಸಿಐಡಿ ವಿಭಾಗದ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದ್ದಾರೆ.
ಈ ಕುರಿತು ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಕರಣದ ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರೇ ಸಮರ್ಥರಿದ್ದಾರೆ ಎಂದು ಹೇಳಿದರು.
