Home ಬೆಂಗಳೂರು ನಗರ ಕಸದ ಸಮಸ್ಯೆ ನಿವಾರಣೆಗೆ ಜನರ ಪಾಲ್ಗೊಳ್ಳುವಿಕೆ, ಅಧಿಕಾರಿಗಳ ಜವಾಬ್ದಾರಿ ಬಹಳ ಅಗತ್ಯ: ನಿವೃತ್ತ ನ್ಯಾಯಮೂರ್ತಿ ಸುಭಾಷ್...

ಕಸದ ಸಮಸ್ಯೆ ನಿವಾರಣೆಗೆ ಜನರ ಪಾಲ್ಗೊಳ್ಳುವಿಕೆ, ಅಧಿಕಾರಿಗಳ ಜವಾಬ್ದಾರಿ ಬಹಳ ಅಗತ್ಯ: ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆಡಿ

22
0
Bengalureans and BBMP have equal stake in waste management: Justice Adi
bengaluru

ಬೆಂಗಳೂರು:

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ನಿವಾರಣೆಗಾಗಿ ನಾಗರಿಕರ ಪಾಲ್ಗೊಳ್ಳುವಿಕೆ ಮತ್ತು ಅಧಿಕಾರಿಗಳ ಜವಾಬ್ದಾರಿ ಬಹಳ ಪ್ರಮುಖವಾಗಿದ್ದು, ವ್ಯವಸ್ಥಿತ ರೀತಿಯಲ್ಲಿ ಕಸದ ಸಮಸ್ಯೆಯನ್ನು ಬಗೆಹರಿಸಬೇಕಿದೆ ಎಂದು ಮಾನ್ಯ ನಿವೃತ್ತ ನ್ಯಾಯಮೂರ್ತಿ ಹಾಗೂ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ರಾಜ್ಯ ಮಟ್ಟದ ರಾಷ್ಟ್ರೀಯ ಘನತ್ಯಾಜ್ಯ ನಿರ್ವಹಣೆ ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಸುಭಾಷ್ ಬಿ. ಆಡಿ ರವರು ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮಗಳು-2016 ಅನುಷ್ಠಾನ, ಘನತ್ಯಾಜ್ಯ ನಿರ್ವಹಣೆ, ಸಾಗಾಣಿಕೆ ಮತ್ತು ಸಂಸ್ಕರಣೆಯ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ನಗರವು ರಾಜ್ಯದ ರಾಜಧಾನಿ ಎಂಬ ದೃಷ್ಟಿಯಿಂದಷ್ಟೇ ಅಲ್ಲದೆ, ರಾಷ್ಟ್ರದ ದೃಷ್ಟಿಯಿಂದಲೂ ಪ್ರಮುಖ ನಗರವಾಗಿದ್ದು, ಕಸದ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡು ಇರುವ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಪಾಲಿಕೆಯ ಅಧಿಕಾರಿಗಳು ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಸರಿಯಾಗಿ ಹರಿತು ನಾಗರಿಕರ ಸಹಭಾಗಿತ್ವದೊಂದಿಗೆ ನಿಯಮಗಳನ್ನು ಎಲ್ಲಾ ವಲಯಗಳಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು.

Bengalureans and BBMP have equal stake in waste management: Justice Adi

ನಗರದಲ್ಲಿ ಎಲ್ಲಾ ನಿವಾಸಿಗಳೂ ತಮ್ಮ ಜವಾಬ್ದಾರಿಯನ್ನು ಹರಿತು ಹಸಿ ಹಾಗೂ ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಣೆ ಮಾಡಿ ಕೊಡಬೇಕು. ಜೊತೆಗೆ ಘನತ್ಯಾಜ್ಯ ನಿರ್ವಹಣೆ ಬಗ್ಗೆ ನಾಗರಿಕರಿಗೆ ತಮ್ಮ ಜವಾಬ್ದಾರಿಗಳ ಬಗ್ಗೆ ಅರಿವಿದೆಯೇ ಎಂಬುದನ್ನು ತಿಳಿಯಬೇಕು. ನಗರದಲ್ಲಿ ಶೇ. 40 ರಷ್ಟು ತ್ಯಾಜ್ಯ ದೊಡ್ಡ ಗಾತ್ರದ ಕಸ(ಬಲ್ಕ್ ಜನರೇಟರ್ಸ್-100 ಕೆ.ಜಿಗೂ ಹೆಚ್ಚು ತ್ಯಾಜ್ಯ) ಉತ್ಪಾದಕರಿಂದ ಬರುತ್ತಿದೆ. ಈ ಸಂಬಂಧ ಬಲ್ಕ್ ಜೆನರೇಟರ್ಸ್ ತ್ಯಾಜ್ಯ ಸಂಗ್ರಹ ಮಾಡಲು ಪಾಲಿಕೆಯಲ್ಲಿ ಎಷ್ಟು ಮಂದಿ ನೋಂದಣಿಯಾಗಿದ್ದಾರೆ, ಎಷ್ಟು ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ, ಎಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು. ಜೊತೆಗೆ ಕಸ ಉತ್ಪತ್ತಿಯ ಸ್ಥಳಗಳ ಸಮೀಕ್ಷೆ, ಅಂಗಡಿ/ಅಪಾರ್ಟ್ಮೆಂಟ್ಸ್ ಗಳ ಸಂಖ್ಯೆ, ಅಂಗಡಿಗಳ ವಿಧ, ಸಂಗ್ರಹಣೆಯಾಗುವ ಕಸ ಸೇರಿದಂತೆ ಇನ್ನಿತ್ಯಾದಿ ಮಾಹಿತಿ ಪಾಲಿಕೆಯಲ್ಲಿ ಲಭ್ಯವಿರಬೇಕು ಎಂದು ಅವರು ಹೇಳಿದರು.

bengaluru

ನಗರದಲ್ಲಿ ಬಲ್ಕ್ ಜನರೇಟರ್ಸ್ ಮೇಲೆ ಮಾರ್ಷಲ್‌ಗಳು ನಿಗಾವಹಿಸಬೇಕು. ಸರಿಯಾಗಿ ತ್ಯಾಜ್ಯ ಸಂಗ್ರಹಣೆ ಹಾಗಾ ಸಾಗಾಣೆ ಆಗದಿದ್ದರೆ ದಂಡ ವಿಧಿಸುವ ಕೆಲಸ ಆಗಬೇಕು. ನಗರದಲ್ಲಿರುವ ತ್ಯಾಜ್ಯ ಸಂಸ್ಕರಣ ಘಟಕಗಳೆಲ್ಲವೂ ಸರಿಯಾಗಿ ಕಾರ್ಯನಿರ್ವಹಿಸಬೇಕು. ಅಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ತ್ಯಾಜ್ಯ ಸಂಸ್ಕರಣ ಘಟಕಗಳ ಬಳಿಯ ಸುತ್ತಮುತ್ತಲಿನ ಹವಾಮಾಣ ತಿಳಿಯಲು ಆಗಿಂದ್ದಾಗ್ಗೆ ನೀರು, ಗಾಳಿಯನ್ನು ಪರಿಶೀಲಿಸಬೇಕು. ತ್ಯಾಜ್ಯ ಸಂಸ್ಕರಣೆ ಮಾಡುವುದರಿಂದ ಸ್ಥಳೀಯ ಜನರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ರಸ್ತೆ ಬದಿ, ಪಾದಚಾರಿ ಮಾರ್ಗ, ಖಾಸಿ ಸ್ಥಳಗಳಲ್ಲಿ ಕಸ ಬಿಸಾಡುವುದಕ್ಕೆ ಸರಿಯಾದ ಶಿಕ್ಷೆ ಹಾಗೂ ದಂಡದ ಕ್ರಮಗಳು ಸರಿಯಾಗಿ ಜಾರಿಯಾಗಬೇಕು. ತ್ಯಾಜ್ಯವನ್ನು ಸರಿಯಾದ ಅನುಕ್ರಮದಲ್ಲಿ ನೀಡುವ ಸಂಬಂಧ ಜನಜಾಗೃತಿಯಾಗಬೇಕು. ಅವಶ್ಯಕತೆಯಿದ್ದಲ್ಲಿ ಜಾಗೃತಿ ಕಾರ್ಯಾಗಾರಗಳನ್ನೂ ನಡೆಸಿ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.

ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ಅವರು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯ ಆಯಾ ವಲಯಗಳ ಜಂಟಿ ಆಯುಕ್ತರ ಮಟ್ಟದಲ್ಲಿ ಕಸ ಸಂಗ್ರಹಣೆ, ವಿಲೇವಾರಿಗೆ ಸಂಬಂಧಿಸಿದಂತೆ ಹೆಚ್ಚು ಕಾರ್ಯಪ್ರವೃತ್ತರಾಗಿ ಕೆಲಸ ಮಾಡಿ, ನಾಗರಿಕರ ಪಾಲ್ಗೊಳ್ಳುವಿಕೆಯಲ್ಲಿ, ಕಸ ಹಾಕುವವರನ್ನು ಗುರುತಿಸುವಲ್ಲಿ, ದಂಡ ವಿಧಿಸುವಲ್ಲಿ ತಮ್ಮ ಅಧಿಕಾರವನ್ನು ಬಳಸುವ ಅಗತ್ಯವಿದೆ ಎಂದು ಹೇಳಿದರು.

ನಗರದಲ್ಲಿ ತ್ಯಾಜ್ಯ ವಿಲೇವಾರಿ ಮಾಡಲು ಮೈಕ್ರೊ ಪ್ಲಾನ್ ಮಾಡಿ, ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಹೆಚ್ಚು-ಹೆಚ್ಚು ದಂಡವನ್ನು ವಿಧಿಸುವ ಕೆಲಸ ಆಗಬೇಕು. ಹಸಿ ಕಸ ಹಾಗೂ ಒಣ ಕಸವನ್ನು ವಿಂಗಡಿಸಿ ಕೊಡುವ ಬಗ್ಗೆ ನಾಗರಿಕರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

Also Read: Bengalureans and BBMP have equal stake in waste management: Justice Adi

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿಗಳಾದ ಶ್ರೀನಿವಾಸುಲು ರವರು ಮಾತನಾಡಿ, ಪಾಲಿಕೆ ವ್ಯಾಪ್ತಿಯ ಖಾಲಿ ಸ್ಥಳಗಳಲ್ಲಿ ಕಸ ಬಿಸಾಡುವವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಜೊತೆ ತ್ಯಾಜ್ಯ ಸಂಸ್ಕರಣಾ ಘಟಕಗಳ ಸುತ್ತಲು ಬಫರ್ ಜೋನ್ ನಿರ್ಮಿಸುವ ಸಂಬಂಧ ಪಾಲಿಕೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

ಸಭೆಯಲ್ಲಿ ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರಾದ ಸರ್ಫರಾಜ್ ಖಾನ್, ಎಲ್ಲಾ ವಲಯ ಜಂಟಿ ಆಯುಕ್ತರು, ಘನತ್ಯಾಜ್ಯ ವಿಭಾಗದ ಅಧೀಕ್ಷಕ ಇಂಜಿನಿಯರ್ ಬಸವರರಾಜ್ ಕಬಾಡೆ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

bengaluru

LEAVE A REPLY

Please enter your comment!
Please enter your name here