ಬೆಂಗಳೂರು;– ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಂಭೀರ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 15ಕ್ಕೇರಿದೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಿನೇಶ್ ಎಂಬಾತ ಮೃತಪಟ್ಟ ಕಾರ್ಮಿಕ. ಅಗ್ನಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರಿಂದ ಯುವಕ ಕೊನೆಯುಸಿರೆಳೆದಿದ್ದಾನೆ. ಅ.7ರಂದು ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ 14 ಮಂದಿ ಸಜೀವ ದಹನವಾಗಿ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾನೆ.
ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು. ಆದರೆ, ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದುರಂತ ಸಂಭವಿಸಿತ್ತು.
The post Bengaluru; ಅತ್ತಿಬೆಲೆ ಪಟಾಕಿ ದುರಂತ, ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕ ಸಾವು appeared first on Ain Live News.