ಬೆಂಗಳೂರು;- ನಾಳಿನ ಸಿಎಂ ಜನತಾದರ್ಶನ ಮುಂದೂಡಿಕೆ ಮಾಡಲಾಗಿದ್ದು, ಮುಂದಿನ ದಿನಾಂಕ ಸದ್ಯದಲ್ಲೇ ಪ್ರಕಟಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ.
ಸೋಮವಾರ ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಮುಖ್ಯಮಂತ್ರಿಗಳು ಇಂದು ರಾತ್ರಿ ದೆಹಲಿಗೆ ತೆರಳುತ್ತಿರುವುದರಿಂದ ಸೋಮವಾರದ ಜನತಾ ದರ್ಶನ ಮುಂದೂಡಲ್ಪಟ್ಟಿದೆ. ದೂರದ ಊರುಗಳಿಂದ ಬೆಂಗಳೂರಿಗೆ ಹೊರಡದಂತೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ವಿನಂತಿಸಿದ್ದಾರೆ
The post Bengaluru; ನಾಳಿನ ಸಿಎಂ ಜನತಾದರ್ಶನ ಮುಂದೂಡಿಕೆ -ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ appeared first on Ain Live News.