Home ಅಪರಾಧ Bengaluru | ಪಿಜಿಯಲ್ಲಿ ನೇಣಿಗೆ ಶರಣಾದ 28 ವರ್ಷದ ಯುವಕ

Bengaluru | ಪಿಜಿಯಲ್ಲಿ ನೇಣಿಗೆ ಶರಣಾದ 28 ವರ್ಷದ ಯುವಕ

7
0
Kothanuru Main Road

ಬೆಂಗಳೂರು: ಬೆಂಗಳೂರಿನ ಕೊತ್ತನೂರಿನ ಕೆ.ನಾರಾಯಣಪುರದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ.

ಯಶವಂತಪುರ ನಿವಾಸಿಯಾಗಿದ್ದ 28 ವರ್ಷದ ಸುನೀಲ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಮಾ.7ರಂದು ತಡರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸುನೀಲ್‌ಗೆ ಡ್ರಗ್ಸ್ ಜೊತೆಗೆ ಹುಡುಗಿಯರ ಶೋಕಿ ಕೂಡ ಇತ್ತು. ತನ್ನ ಚಟಕ್ಕಾಗಿ ಮನೆಯಲ್ಲಿಯೇ ಚಿನ್ನ, ಹಣ ಕಳ್ಳತನ ಮಾಡುತ್ತಿದ್ದ. ಇದನ್ನು ಮನೆಯವರು ಪ್ರಶ್ನಿಸಿದರೇ ಸಾಯೋದಾಗಿ ಹೇಳುತ್ತಿದ್ದ.

ನಂತರ ಮನೆಬಿಟ್ಟು ಕೊತ್ತನೂರು ಪಿಜಿ ಸೇರಿದ್ದ ಸುನೀಲ್, ಗ್ಯಾರೇಜ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಮಾ.7ರಂದು ರಾತ್ರಿ ಮಾಲೀಕನಿಗೆ ಸಾಯೋದಾಗಿ ಮೆಸೆಜ್ ಮಾಡಿದ್ದ. ಬಳಿಕ ಪಿಜಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

LEAVE A REPLY

Please enter your comment!
Please enter your name here