ಬೆಂಗಳೂರು ಅಂಗನವಾಡಿ ಕಂ ಕ್ರೆಚ್ ನೇಮಕಾತಿ 2026: 17 ಕೇಂದ್ರಗಳಲ್ಲಿ 34 ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 9: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ರಾಜ್ಯ ಯೋಜನೆ ವ್ಯಾಪ್ತಿಯ 17 ಅಂಗನವಾಡಿ ಕಂ ಕ್ರೆಚ್ ಕೇಂದ್ರಗಳಲ್ಲಿ ಗೌರವಧನ ಆಧಾರಿತ 34 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರಲ್ಲಿ 17 ಕಾರ್ಯಕರ್ತೆಯರು ಮತ್ತು 17 ಸಹಾಯಕಿಯರ ಹುದ್ದೆಗಳು ಸೇರಿವೆ.
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸೆಪ್ಟೆಂಬರ್ 22, 2026ರ ಸಂಜೆ 5.30ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬೆಂಗಳೂರು ರಾಜ್ಯ ಯೋಜನೆ, ಬಿಬಿಎಂಪಿ ಕಟ್ಟಡ, ಮೊದಲನೇ ಮಹಡಿ, ಎನ್.ಆರ್. ಕಾಲೋನಿ, ಬೆಂಗಳೂರು-19 ಇಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ 080-26601917 ದೂರವಾಣಿ ಸಂಖ್ಯೆ ಅಥವಾ cdpobangalorestateproject@gmail.com ಇ-ಮೇಲ್ ಮೂಲಕ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
