ಬಸವರಾಜ ಬೊಮ್ಮಾಯಿ ಅವರ ಎಕ್ಸ್ ಪೋಸ್ಟ್.
ಬೆಂಗಳೂರು: 2014ರಿಂದ ಭಾರತದಲ್ಲಿ ಪ್ರಜಾಪ್ರಭುತ್ವ ‘ಸತ್ತುಹೋಗಿದೆ’ ಎಂದು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುವ ವಿಫಲ ಯತ್ನ ನಡೆಸಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬೊಮ್ಮಾಯಿ, ಹೈದರಾಬಾದ್‌ನ ಭಾರತ್ ಸಮಿತಿಯಲ್ಲಿ ರಾಹುಲ್ ಗಾಂಧಿ ಆಡಿದ ಮಾತನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ತುರ್ತು ಪರಿಸ್ಥಿತಿ ಹೇರುವ ಮೂಲಕ ಸಂವಿಧಾನವನ್ನು ಯಾವ ಪಕ್ಷ ಮೊಟಕುಗೊಳಿಸಿತ್ತು, ತನಗೆ ವಿರುದ್ಧವಾದ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಬೈಪಾಸ್ ಮಾಡಲು ಯಾವ ಪಕ್ಷ ಕಾನೂನು ರೂಪಿಸಿತ್ತು ಎಂಬುದಕ್ಕೆ ಹಲವು ಉದಾಹರಣೆಗಳಿವೆ ಎಂದು ಅವರು ಪ್ರಶ್ನಿಸಿದ್ದಾರೆ. ಇಂತಹ ಪಕ್ಷದಿಂದ ಪ್ರಜಾಪ್ರಭುತ್ವದ ಪಾಠ ಕೇಳಲು ಜನತೆ ಸಿದ್ಧರಿಲ್ಲ ಎಂದು ಹೇಳಿದ್ದಾರೆ.
2014ರಿಂದ ಸತತ ಚುನಾವಣಾ ಸೋಲುಗಳಿಂದ ಹತಾಶರಾಗಿರುವ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದ್ದು, ಇದು 2029ರ ಚುನಾವಣೆಯಲ್ಲಿ ಸೋಲನ್ನು ಮೊದಲೇ ಒಪ್ಪಿಕೊಂಡಂತಾಗಿದೆ ಎಂದಿದ್ದಾರೆ. ಹಿಂದೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಇಂತಹ ದಾಳಿಗಳು ಅವರನ್ನು ಇನ್ನಷ್ಟು ಬಲಿಷ್ಠಗೊಳಿಸಿವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಬೊಮ್ಮಾಯಿ ಈ ಹೇಳಿಕೆಯನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
