Bengaluru: BBMP locked Rockline Mall due to non-payment of Rs 11.51 crore property tax| 11.51 ಕೋಟಿ ರೂ. ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ರಾಕ್ ಲೈನ್ ಮಾಲ್ ಗೆ ಬೀಗ ಜಡಿದ ಬಿಬಿಎಂಪಿಯ ಕಂದಾಯ ಇಲಾಖೆ
ಬೆಂಗಳೂರು: ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ದಾಸರಹಳ್ಳಿ ವ್ಯಾಪ್ತಿಯ ಜಾಲಹಳ್ಳಿಯಲ್ಲಿರುವ ರಾಕ್ ಲೈನ್ ಮಾಲ್ ಗೆ ಪಾಲಿಕೆ ಕಂದಾಯ ಇಲಾಖೆಯ ಅಧಿಕಾರಿಗಳು ಬುಧವಾರ ಸೀಲ್ ಮಾಡಿದ್ದಾರೆ.
2011 ರಿಂದ 2022-23 ರವರೆಗೆ ಪಾವತಿಸಬೇಕಾಗಿದ್ದ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾವತಿಸಲು ಪಾಲಿಕೆ ಡಿಮಾಂಡ್ ನೋಟೀಸ್ ನೀಡಿದ್ದರೂ, ಮಾಲ್ ನ ಮಾಲೀಕರು ತೆರಿಗೆ ಪಾವತಿಸಿರಲಿಲ್ಲ ಎನ್ನಲಾಗಿದೆ.


- ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ.
- ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ತೆರಿಗೆಯನ್ನು ಪಾವತಿಸಿರುವುದಿಲ್ಲ.
ಸ್ಥಳದಲ್ಲಿ ವಲಯ ಆಯುಕ್ತರಾದ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತ ಬಾಲಶೇಖರ್ ದಾಸರಹಳ್ಳಿ, ವಲಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್ ಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
