Home ಬೆಂಗಳೂರು ನಗರ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

35
0
Bengaluru Bommanahalli BJP MLA's two cars torched
bengaluru

ಬೆಂಗಳೂರು:

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆ ಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಎರಡೂ‌ ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಬುಧವಾರ ರಾತ್ರಿ 1.30ರ ವೇಳೆಗೆ ನಾಲ್ವರು ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿ ಪರಾರಿಯಾಗಿದ್ದಾರೆ.

ಘಟನೆ ಬಗ್ಗೆ ಸತೀಶ್ ರೆಡ್ಡಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಕಮಿಷನರ್ ಮುರುಗನ್ ಹಾಗೂ ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಷಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

bengaluru

‘ಭದ್ರತಾ ಸಿಬ್ಬಂದಿ ಮನೆ ಎದುರಿನ ಪ್ರವೇಶ ದ್ವಾರದ ಬಳಿ ಇದ್ದರು. ಆದರೆ, ಹಿಂದಿನ ದ್ವಾರದಿಂದ ಬಂದಿರುವ ಕಿಡಿಗೇಡಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಇದ್ದು, ಆರೋಪಿಗಳ ಮುಖ ಸ್ಪಷ್ಟವಾಗಿ ಸೆರೆಯಾಗಿಲ್ಲ’ ಎಂದು ಡಿಸಿಪಿ ಶ್ರೀನಾಥ್ ಜೋಷಿ ಹೇಳಿದರು.

bengaluru

LEAVE A REPLY

Please enter your comment!
Please enter your name here