ದೇವನಹಳ್ಳಿ (ಬೆಂಗಳೂರು ಗ್ರಾಮೀಣ): ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಜರುಗಿದೆ.
ದಾಸರಿ ಬ್ರಹ್ಮಸಾಯಿರೆಡ್ಡಿ ಎಂಬ ವಿದ್ಯಾರ್ಥಿ ನಿನ್ನೆ ರಾತ್ರಿ ಊಟ ಮಾಡಿದ ಬಳಿಕ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೊದಲನೆ ವರ್ಷದ ಬಿಟೆಕ್ ವ್ಯಾಸಾಂಗ ಮಾಡುತ್ತಿದ್ದ ದಾಸರಿ ಬ್ರಹ್ಮಸಾಯಿರೆಡ್ಡಿ, ರಾತ್ರಿ ಊಟ ಮಾಡಿ ತನ್ನ ಕೋಣೆಗೆ ಮರಳಿದ್ದ. ಈ ವೇಳೆ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ.
ಕಳೆದ ನಾಲ್ಕು ತಿಂಗಳಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ರಾತ್ರಿಯು ಓರ್ವ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ. ನವೆಂಬರ್ನಲ್ಲಿ ನೇಣು ಬಿಗಿದುಕೊಂಡು ಓರ್ವ ವಿದೇಶಿ ವಿದ್ಯಾರ್ಥಿನಿ ಮೃತಪಟ್ಟಿದ್ದಳು.
ಕಳೆದ ಪೆಬ್ರವರಿ 06 ರಂದು ರೈಲಿಗೆ ಸಿಲುಕಿ ಓರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ ಇದೀಗ ಹಾಸ್ಟೆಲ್ ಮಹಡಿ ಮೇಲಿಂದ ಬಿದ್ದು ಆಂಧ್ರ ಮೂಲದ ಮತ್ತೋರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಪ್ರತಿಷ್ಠಿತ ಗೀತಂ ವಿವಿಯಲ್ಲಿ ಸಾಲು ಸಾಲು ಸಾವುಗಳು ಸಂಭವಿಸುತ್ತಿದ್ದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.