ಪೊಲೀಸ್, ನ್ಯಾಯಾಲಯದಿಂದ ತಪ್ಪಿಸಿಕೊಳ್ಳುತ್ತಿದ್ದ 17ಕ್ಕೂ ಹೆಚ್ಚು ಮಂದಿಯ ವಿರುದ್ಧ ಸಿಸಿಬಿ ಕ್ರಮ
ಬೆಂಗಳೂರು: ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಹಾಗೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಇದ್ದ 17ಕ್ಕೂ ಹೆಚ್ಚು ರೌಡಿಶೀಟರ್ಗಳು ಮತ್ತು ಆರೋಪಿಗಳ ವಿರುದ್ಧ ಕಳೆದ ಒಂದು ತಿಂಗಳಲ್ಲಿ ಸಿಸಿಬಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸರು ಅಕ್ಟೋಬರ್ 7ರಂದು ತಿಳಿಸಿದ್ದಾರೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಮತ್ತು ನ್ಯಾಯಾಲಯಕ್ಕೆ ಹಾಜರಾಗದವರನ್ನು ಗುರಿಯಾಗಿಸಿಕೊಂಡು ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ಹೇಳಿದೆ.
ಸಿಸಿಬಿ ಕಾರ್ಯಾಚರಣೆ ಮತ್ತಷ್ಟು ತೀವ್ರ
ಬೆಂಗಳೂರಿನಲ್ಲಿ ರೌಡಿಶೀಟರ್ಗಳ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ವಿಶೇಷ ಕಾರ್ಯಾಚರಣೆಯ ಉದ್ದೇಶವಾಗಿದೆ. ಒಟ್ಟಾರೆ 17ಕ್ಕೂ ಹೆಚ್ಚು ಮಂದಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿಯೂ ನಗರದಲ್ಲಿ ರೌಡಿ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಿಸಿಬಿ ತಿಳಿಸಿದೆ.
