Home ಆರೋಗ್ಯ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ 100 ಹಾಸಿಗೆಗಳ ನೂತನ ಸುಸಜ್ಜಿತ ಐಸಿಯು

ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ 100 ಹಾಸಿಗೆಗಳ ನೂತನ ಸುಸಜ್ಜಿತ ಐಸಿಯು

59
0

ಕಾಗ್ನಿಜೆಂಟ್‌ ಫೌಂಡೇಶನ್‌ ನೆರವು: ಡಿಸಿಎಂ ಅವರಿಂದ ಲೋಕಾರ್ಪಣೆ

ಬೆಂಗಳೂರು:

ನಗರದ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ (IGICH)ನಲ್ಲಿ ಕಾಗ್ನಿಜೆಂಟ್ ಫೌಂಡೇಶನ್ ನೆರವಿನಿಂದ ಸ್ಥಾಪನೆ ಮಾಡಲಾಗಿರುವ 100 ಹಾಸಿಗೆಗಳ ಮಕ್ಕಳ ತೀವ್ರ ನಿಗಾ ಘಟಕವನ್ನು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಂಗಳವಾರ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಮಕ್ಕಳಿಗಾಗಿಯೇ ಇಂಥ ಅತ್ಯುತ್ತಮ ಐಸಿಯು ಸಿದ್ಧಪಡಿಸಲು ದೊಡ್ಡ ಪ್ರಮಾಣದಲ್ಲಿ ಕೈಜೋಡಿಸಿದ ಕಾಗ್ನಿಜೆಂಟ್‌ ಸಂಸ್ಥೆಗೆ ಅಭಿನಂದನೆ. 1.32 ಕೋಟಿ ರೂ. ವೆಚ್ಚದಲ್ಲಿ ಐಸಿಯು ಸೌಲಭ್ಯವನ್ನು ಅಭಿವೃದ್ಧಿಪಡಿಲಾಗಿದೆ ಎಂದರು.

ಆಸ್ಪತ್ರೆಯಲ್ಲಿ ಐಸಿಯು ಹಾಸಿಗೆಗಳ ಸಂಖ್ಯೆಯನ್ನು ಈಗ 30ರಿಂದ 100ಕ್ಕೆ ಹೆಚ್ಚಿಸಲಾಗಿದೆ. ಕೋವಿಡ್‌-19 ಸೋಂಕಿಗೆ ತುತ್ತಾಗುವ ಶಿಶುಗಳಿಗೆ ಮತ್ತು ಮಕ್ಕಳಿಗೆ ಇಲ್ಲಿ ಅತ್ಯುತ್ತಮ ಚಿಕಿತ್ಸೆ ಲಭ್ಯವಾಗಲಿದೆ. ಮಕ್ಕಳಿಗೆ ಅಗತ್ಯವಾದ ಪಿಪಿಇ ಕಿಟ್‌ಗಳು, ಆಕ್ಸಿಜನ್‌ ಬೆಡ್‌ಗಳು, ವೆಂಟಿಲೇಟರ್‌ಗಳು, ಮಲ್ಟಿ ಪ್ಯಾರಾಮಾನಿಟರ್‌ಗಳು ಸೇರಿ ಎಲ್ಲ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರವು ಸೋಂಕಿನ ಕಾಯಿಲೆ ಹತ್ತಿಕ್ಕಲು ಎಲ್ಲ ಕ್ರಮಗಳನ್ನೂ ಕೈಗೊಂಡಿದೆ. ಮೂರನೇ ಅಲೆ ತಡೆಯುವುದಕ್ಕೆ ಸಾಧ್ಯವಾದ ಸರ್ವ ಉಪ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಕಾಗ್ನಿಜೆಂಟ್‌ ಇಂಡಿಯಾ ಅಧ್ಯಕ್ಷ ರಾಜೇಶ್‌ ನಂಬಿಯಾರ್‌, ನಗರದ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ನಿರ್ದೇಶಕ ಡಾ.ಕೆ.ಎಸ್.‌ಸಂಜಯ್‌ ಮುಂತಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮ ವರ್ಚುವಲ್ ನಲ್ಲಿ‌ ನಡೆಯಿತು.

LEAVE A REPLY

Please enter your comment!
Please enter your name here