ಬೆಂಗಳೂರು:
ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಒಂದು ವರ್ಷದಲ್ಲಿ ಬೆಂಗಳೂರು ನಗರದ ಚಿತ್ರಣವನ್ನೇ ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಮತ್ತು ರಾಷ್ಟ್ರದಲ್ಲಿ ದಿನೇ ದಿನೇ ತನ್ನ ಸಾಧನೆಯನ್ನು ಉತ್ತಮಗೊಳಿಸುತ್ತಾ ಮುನ್ನಡೆಯುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಶೇಕಡಾ 60ಕ್ಕಿಂತ ಹೆಚ್ಚಿನ ಸ್ಥಾನ ಗಳಿಸಿದ್ದಾರೆ. ಇದಕ್ಕೆ ಪಕ್ಷದ ಸಾಮೂಹಿಕ ನಾಯಕತ್ವ ಮತ್ತು ಕಾರ್ಯಕರ್ತರು ಕಾರಣ ಎಂದು ಅವರು ಹೇಳಿದರು.
5728 ಗ್ರಾಂ ಪಂಚಾಯತ್ ಗಳ ಪೈಕಿ ಅತಿಹೆಚ್ಚು ಗ್ರಾಮ 3800 ಗ್ರಾಮ ಪಂಚಾಯತ್ ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಇದು ದೊಡ್ಡ ಸಾಧನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್ ಡಿಎ ಸರ್ಕಾರ 2022ರ ವೇಳೆ ರೈತರ ಆದಾಯ ದ್ವಿಗುಣಗೊಳಿಸುವ ಉದ್ದೇಶ ಹೊಂದಿದೆ. ರೈತರ ಶ್ರೆಯೋಭಿವೃದ್ಧಿಗಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ರೈತರು ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಎಂಎಸ್ ಪಿ ವ್ಯವಸ್ಥೆ ಮುಂದುವರಿಯುತ್ತದೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು. UNI