Bengaluru: Couple having naked sex in car: what happened next? couple escaped by running the car over the police| ಕಾರಿನಲ್ಲೇ ಬೆತ್ತಲಾಗಿ ಜೋಡಿಯ ಕಾಮದಾಟ: ಆಮೇಲೇನಾಯ್ತು? ಪೊಲೀಸ್ ಮೇಲೆಯೆ ಕಾರು ಚಲಾಯಿಸಿಕೊಂಡು ಜೋಡಿ ಪರಾರಿ
ಬೆಂಗಳೂರು:
ಬೆಂಗಳೂರಿನ ಉದ್ಯಾನವೊಂದರ ಬಳಿ ಜೋಡಿಯೊಂದು ಮಟ ಮಟ ಮಧ್ಯಾಹ್ನವೇ ಕಾರಿನಲ್ಲೇ ಬೆತ್ತಲಾಗಿ ಕಾಮತೃಷೆ ತೀರಿಸಿಕೊಳ್ಳಲು ಮುಂದಾದ ಘಟನೆ ಜರುಗಿದೆ.
ಇದೇ ವೇಳೆ, ದೃಶ್ಯ ಕಂಡು ಬುದ್ಧಿಹೇಳಲು ಬಳಿ ತೆರಳಿದ ಪೊಲೀಸ್ ಮೇಲೆಯೆ ಕಾರು ಚಲಾಯಿಸಿಕೊಂಡು ಜೋಡಿ ಪರಾರಿಯಾಗಿದೆ. ಗಾಯಗೊಂಡ ಸಬ್ ಇನ್ಸ್ಪೆಕ್ಟರ್ ಮಹೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಜ್ಞಾನಭಾರತಿ ಪೊಲೀಸ್ ಠಾಣೆ (Jnanabharathi Police Station) ವ್ಯಾಪ್ತಿಯ ಉದ್ಯಾನವನವೊಂದರ ಬಳಿ ಕಿಯೋ ಸೆಲಾಟೋಸ್ ಕಾರಿನಲ್ಲಿ ಬಂದಿದ್ದ ಜೋಡಿಯೊಂದು ಅಲ್ಲೇ ಬಟ್ಟೆಬಿಚ್ಚಿ ಕಾಮಕೇಳಿ ಆರಂಭಿಸಿದೆ. ಪಾರ್ಕ್ನಲ್ಲಿ ಅನೇಕ ಮಂದಿ ಇದ್ದರೂ, ಅವರಿಗೆಲ್ಲ ತಾವು ಕಾಣಿಸುತ್ತಿದ್ದರೂ ಅದನ್ನು ಲೆಕ್ಕಿಸದೆ ಜೋಡಿ ಸರಸದಲ್ಲಿ ತಲ್ಲೀನವಾಗಿದೆ. ಇದೇ ವೇಳೆ ಅಲ್ಲಿ ಕರ್ತವ್ಯ ನಿರತರಾಗಿದ್ದ ಸಬ್ ಇನ್ಸ್ಪೆಕ್ಟರ್ ಮಹೇಶ್ ಆ ಜೋಡಿಯನ್ನು ಗಮನಿಸಿದ್ದಾರೆ.
ಜೋಡಿಗೆ ಬುದ್ಧಿ ಹೇಳಬೇಕು ಎಂದುಕೊಂಡ ಸಬ್ ಇನ್ಸ್ಪೆಕ್ಟರ್ ಮಹೇಶ್ ಕಾರಿನ ಬಳಿ ತೆರಳಿದ್ದಾರೆ. ಕಾರಿನ ಬಳಿ ಹೋಗಿ ನಂಬರ್ ಪ್ಲೇಟ್ ಪರಿಶೀಲನೆ ನಡೆಸಿದ್ದಾರೆ. ಅಷ್ಟರಲ್ಲಿ ಎಚ್ಚೆತ್ತುಕೊಂಡ ಯುವಕ ಏಕಾಏಕಿ ಕಾರು ಚಲಾಯಿಸಿದ್ದಾನೆ. ದಿಢೀರ್ ಕಾರು ಚಲಿಸಲು ಆರಂಭಿಸಿದ ಕಾರಣ ಸಬ್ ಇನ್ಸ್ಪೆಕ್ಟರ್ ಮಹೇಶ್ ಬಾನೆಟ್ ಮೇಲೆ ಬಿದ್ದಿದ್ದಾರೆ. ಅವರು ಕಾರಿನ ಬಾನೆಟ್ ಹಿಡಿದುಕೊಂಡು ಒದ್ದಾಡುತ್ತಿದ್ದರೂ ಲೆಕ್ಕಿಸದ ಯುವಕ ಕಾರು ಚಲಾಯಿಸಿದ್ದಾನೆ. ಏಕಾಏಕಿ ಕಾರನ್ನು ರಿವರ್ಸ್ ತೆಗೆದು ಮತ್ತೆ ಮುಂದಕ್ಕೆ ಚಲಾಯಿಸಿದ್ದಾನೆ. ಪರಿಣಾಮವಾಗಿ ಕೆಳಬಿದ್ದ ಸಬ್ ಇನ್ಸ್ಪೆಕ್ಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
