Home ಬೆಂಗಳೂರು ನಗರ ಬೆಂಗಳೂರು ಅಭಿವೃದ್ಧಿ ನಮ್ಮೆಲ್ಲರ ಗುರಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು ಅಭಿವೃದ್ಧಿ ನಮ್ಮೆಲ್ಲರ ಗುರಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

180
0
Bengaluru development is our goal Deputy Chief Minister DK Shivakumar
Bengaluru development is our goal Deputy Chief Minister DK Shivakumar

‘ಬ್ರಾಂಡ್ ಬೆಂಗಳೂರು ಬೆಟರ್ ಬೆಂಗಳೂರು’ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಸಲಹೆಗಳ ಆಲಿಕೆ

ಬೆಂಗಳೂರು:

ಬ್ರಾಂಡ್ ಬೆಂಗಳೂರು ಬೆಟರ್ ಬೆಂಗಳೂರು ಆಗಬೇಕು ಎನ್ನುವ ಉದ್ದೇಶದಿಂದ ಬೆಂಗಳೂರಿನ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಪಕ್ಷಗಳ ಶಾಸಕರ ಮತ್ತು ಲೋಕಸಭಾ ಸದಸ್ಯರನ್ನು ಒಳಗೊಂಡ ಸಭೆಯನ್ನು ಇಂದು ಹಮ್ಮಿಕೊಂಡು ಜನಪ್ರತಿನಿಧಿಗಳಿಂದ ಸಲಹೆ ಮತ್ತು ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರಿನ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಧೀರ್ಘ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಮುಗಿಯುವುದರ ಜೊತೆಯಲ್ಲಿ ರಾಜಕಾರಣ ಸಹ ಮುಗಿದಿದೆ, ಬೆಂಗಳೂರು ಅಭಿವೃದ್ಧಿ ನಮ್ಮೆಲ್ಲರ ಗುರಿ, ನಮ್ಮ ನಗರದ ಅಂತರರಾಷ್ಟ್ರೀಯ ಮಾನ್ಯತೆಯನ್ನು ಕಾಪಾಡೋಣ. ಈ ನಿಟ್ಟಿನಲ್ಲಿ ಎಲ್ಲಾ ಜನಪ್ರತಿನಿಧಿಗಳಿಗೂ ಹಾಗೂ ಹಿರಿ ಅಧಿಕಾರಿಗಳೂ ಸಲಹೆ ನೀಡಿದ್ದಾರೆ ಎಂದರು.

ಬೆಂಗಳೂರಿನ ಶಾಸಕರು ತಮ್ಮ‌ ಸಮಸ್ಯೆಗಳನ್ನು ಹೇಳಿದ್ದಾರೆ ಮತ್ತು ಸಲಹೆ ನೀಡಿದ್ದಾರೆ. ಬ್ರಾಂಡ್ ಬೆಂಗಳೂರು ಬೆಟರ್ ಬೆಂಗಳೂರು ಆಗಬೇಕು, ಕುಡಿಯುವ ನೀರು, ಕಸ ನಿರ್ವಹಣೆ, ಟ್ರಾಫಿಕ್ ಮಾಸ್ಟರ್ ಪ್ಲಾನ್ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಮುಖ್ಯವಾಗಿ ಮಳೆಗಾಲದ ಸಂದರ್ಭದಲ್ಲಿ ತಲೆದೂರುವ ಮುಖ್ಯ ಸಮಸ್ಯೆಗಳಿಗೆ ಕಾರಣವಾಗಿರುವ ಒತ್ತುವರಿ ಹಾಗೂ ರಾಜಕಾಲುವೆ ನಿರ್ವಹಣೆ ಕುರಿತು ಸಹ ಚರ್ಚಿಸಲಾಯಿತು.

ಎಸ್.ಎಂ.ಕೃಷ್ಣ ಕಾಲದ ರೀತಿಯಲ್ಲಿ ಬೆಂಗಳೂರಿನ ಸ್ಟೇಕ್ ಹೋಲ್ಡರ್ ಗಳನ್ನು ಭೇಟಿ ಮಾಡಿ ವಿಷನ್ ಬೆಂಗಳೂರು ಮತ್ತು ಗ್ಲೂಬಲ್ ಬೆಂಗಳೂರು ಅಡ್ವೈಸರಿ ಕಮಿಟಿ ರಚಿಸಲು ಯೋಜಿಸಲಾಗಿದೆ. ಬೆಂಗಳೂರು ಅಭಿವೃದ್ಧಿಯಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಪಾಲುದಾರರಾಗಿರುವ ಎಲ್ಲರನ್ನೂ ಒಳ್ಗೊಂಡ ಪ್ರತ್ಯೇಕ ವಿಷಯಗಳ ಮೇಲೆ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.

ವಾರ್ಡಿಗೊಂದು ಪ್ರತ್ಯೇಕ ಕಡತ ಮಾಡಿ ಲೆಕ್ಕಚಾರ ಇಡಬೇಕು, ವಾರ್ಡ್ ವಾರು ಅಭಿವೃದ್ಧಿ ಕಾರ್ಯಗಳ ಆರಂಭ, ಮಧ್ಯಂತರ ಮತ್ತು ಪೂರ್ಣಗೊಂಡ ವಿಡಿಯೊ ಮತ್ತು ಛಾಯಾಚಿತ್ರಗಳನ್ನು ಕಡತದಲ್ಲಿ ಮಂಡಿಸಬೇಕು, ಅಕೌಂಟಿಬಿಲಿಟಿ ಮತ್ತು ಟ್ರಾನ್ಸಫರೆನ್ಸಿಗೆ ಹೆಚ್ಚಿನ ಒತ್ತು ನೀಡಲಾಗುವುದು.

ಕಸ ನಿರ್ವಹಣೆಯ ಲೆಕ್ಕ ಪಕ್ಕಾ ಇರಬೇಕು, ಎಲ್ಲಿಂದ ಎಲ್ಲಿಗೆ ಸಾಗಿಸಲಾಯಿತು ಎನ್ನುವುದು ಲೆಕ್ಕವಿರಬೇಕು, ಬೆಂಗಳೂರಿನ ಸ್ವಚ್ಛತೆ ನಮ್ಮೆಲ್ಲರ ಹೊಣೆ. ಬಿಡಿಎ ಕಾಂಪ್ಲೆಕ್ಸ್ ಗಳ ರಿ-ಮಾಡೆಲಿಂಗ್ ಸಲಹೆ ಸಹ ಸ್ವೀಕರಿಸಲಾಗಿದೆ. ಕುಡಿಯುವ ನೀರಿನ ನಿರ್ವಹಣೆ ಸರಬರಾಜು ಸಮಸ್ಯೆ ಬಗ್ಗೆ ಗಮನ ಹರಿಸಲಾಗುವುದು.

ಒಂದೂವರೆ ಕೋಟಿ ಜನಸಂಖ್ಯೆ ಇರುವ ಈ ಬೆಂಗಳೂರು ಎಲ್ಲರಿಂದಲೂ ಬೆಳೆದಿದೆ. ಬೆಂಗಳೂರು ಇತಿಹಾಸವನ್ನು ಮರು ಸೃಷ್ಟಿಸುವ ಅಗತ್ಯವಿದೆ. ಮಳೆ ಬಂದ್ರೆ ಹೇಗೆ ನಿರ್ವಹಣೆ ಮಾಡಬೇಕು, ಬಾಟಲ್ ನೆಕ್ ಗಳನ್ನು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗುವುದು, ವಿಡಿಯೋ ಕ್ಯಾಮೆರಾಗಳನ್ನು ಹಾಕಲು ಕ್ರಮ ಕೈಗೊಳ್ಳಲಾಗುವುದು.

ಹಲವರು‌ ಒಳ್ಳೊಳ್ಳೆ ಸಲಹೆಗಳನ್ನು ನೀಡಿದ್ದಾರೆ, ನಾಲ್ಕು ಜನ‌ ಎಂಪಿಗಳು ಭಾಗವಹಿಸಿದ್ದರು, ಕೆಲವರು ಮುನಿಸಿಕೊಂಡು ಹೋಗಿದ್ದಕ್ಕೆ ನಂಗೆ ಕಾರಣಗಳು ಗೊತ್ತಿಲ್ಲ. ಬದಲಾವಣೆ ಒಂದೆ ದಿನ ಮಾಡಲು ಸಾಧ್ಯವಿಲ್ಲ, ಇದೇ ರೀತಿಯಲ್ಲಿ ಕಾಲ-ಕಾಲಕ್ಕೆ ಸಂಬಂಧಿಸಿದವರ ಜೊತೆ ಸಭೆಗಳನ್ನು ಹಮ್ಮಿಕೊಳ್ಳುವ ಮೂಲಕ ನವ ಬೆಂಗಳೂರಿಗಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here