ಬೆಂಗಳೂರು:
ಚಾಮರಾಜಪೇಟೆಯ ಆನಂದಪುರ, ವಿನಾಯಕ ಚಿತ್ರಮಂದಿರ ಬಳಿ ಇರುವ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮು ಹಾಗೂ 8 ಶೀಟ್ ಮನೆಗಳು ಬೆಂಕಿಗಾಹುತಿಯಾಗಿವೆ.
ಘಟನೆಯಲ್ಲಿ ಒಬ್ಬರಿಗೆ ಗಾಯಗಳಾಗಿವೆ. 2 ಸಿಲಿಂಡರ್ಗಳು ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಅಗ್ನಿ ಅವಘಡದಲ್ಲಿ ಗಾಯೊಂಡಿರುವ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.