Bengaluru: Fire mishap in perfume factory: Three burnt to death, five injured| ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಸಜೀವದಹನ, ಐವರಿಗೆ ಗಾಯ
ಬೆಂಗಳೂರು : ಪರ್ಫ್ಯೂಮ್ ಫ್ಯಾಕ್ಟರಿ (perfume factory) ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಸಂಭವಿಸಿದೆ.
ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಫ್ಯಾಕ್ಟರಿ ಹೊತ್ತಿ ಉರಿದಿದೆ ಎನ್ನಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯಲ್ಲಿ ಗಾಯಗೊಂಡ ಐವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂವರ ಮೃತದೇಹಗಳು ಆರ್.ಆರ್.ನಗರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
