ಬೆಂಗಳೂರು:
ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಗುರುವಾರ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ.
ಪತ್ನಿ ವಿಜಯಾ(28), ಪುತ್ರಿಯರಾದ ನಿಶಾ(7), ದೀಕ್ಷಾ(5) ಮೃತ ದುರ್ದೈವಿಗಳು. ಕ್ಯಾನ್ಸರ್ ನಿಂದ ಬಳಲುತ್ತಿರುವ ನಾಗೇಂದ್ರ, ತನ್ನ ಪತ್ನಿ ವಿಜಯಾ ಮತ್ತು ಮಕ್ಕಳಾದ ನಿಷಾ ಹಾಗೂ ದೀಕ್ಷಾಅವರನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ನಾಗೇಂದ್ರ ಊಟದಲ್ಲಿ ತಿಗಣಿ ಔಷಧಿ, ಇಲಿ ಔಷಧ ಬೇರಿಸಿ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ತಿನಿಸಿದ್ದಾನೆ. ಬಳಿಕ ತಾನೂ ಅದನ್ನು ಸೇವಿಸಿದ್ದಾನೆ. ಆದರೆ ನಾಗೇಂದ್ರ ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.