ಜಗನ್ನಾಥ ಭವನದಲ್ಲಿ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದ ಕರ್ನಾಟಕ ಬಿಜೆಪಿ ಮುಖಂಡರು.
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ 151ನೇ ಜನ್ಮ ಜಯಂತಿ ಅಂಗವಾಗಿ ಕರ್ನಾಟಕ ಬಿಜೆಪಿ ಭಾನುವಾರ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು.
ಬಿಜೆಪಿ ರಾಜ್ಯ ಸಹ ಉಸ್ತುವಾರಿ ಕಾಸಂ ವೆಂಕಟೇಶ್ವರಲು, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಪ್ರಮುಖರಾದ ಕರುಣಾಕರ್ ಯಾದವ್, ಮಲ್ಲೇಶ್ವರ ಮಂಡಲ ಅಧ್ಯಕ್ಷ ಕೇಶವ ಐತಾಳ, ಪಕ್ಷದ ಪ್ರಮುಖರು, ಕಾರ್ಯಾಲಯ ಸಿಬ್ಬಂದಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸ್ವಾತಂತ್ರ್ಯ ಸೇನಾನಿ ಬಿರ್ಸಾ ಮುಂಡಾ ಅವರು ದೇಶಕ್ಕಾಗಿ ತಮ್ಮನ್ನೇ ಅರ್ಪಿಸಿಕೊಂಡವರು ಎಂದು ಪಕ್ಷದ ಪ್ರಮುಖರು ಹೇಳಿದರು. ಬಿಜೆಪಿ ಎಸ್‌ಟಿ ಮೋರ್ಚಾದಿಂದ ಈ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಬಿಜೆಪಿ ‘ಜನಜಾತಿ ಗೌರವ ದಿವಸ’ ಎಂದು ಆಚರಿಸುತ್ತದೆ ಎಂದು ಅವರು ತಿಳಿಸಿದರು.
