ಬೆಂಗಳೂರು: ಮೇಡಹಳ್ಳಿ ಮೇಲ್ಸೇತುವೆ ಮೇಲೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ನಿಂತಿದ್ದ ಕ್ಯಾಂಟರ್ಗೆ ಹಿಂಬದಿಯಿಂದ ಬಂದ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆಯು ಸಂಭವಿಸಿದೆ.
ಅಪಘಾತದಲ್ಲಿ ಕ್ಯಾಂಟರ್ನ ಚಾಲಕ ಮತ್ತು ಸಹಾಯಕ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ಪರಿಣಾಮವಾಗಿ ಕ್ಯಾಂಟರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಕೆಆರ್ ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ಘಟನೆ ರಾತ್ರಿ 11:45ರ ಸುಮಾರಿಗೆ ಸಂಭವಿಸಿದೆ. ಕ್ಯಾಂಟರ್ ಕೋಲಾರದಿಂದ ಕೆಆರ್ ಮಾರ್ಕೆಟ್ ಕಡೆ ಬರುತ್ತಿದ್ದಾಗ, ಇದು ಪಂಚರ್ ಆಗಿ ರಸ್ತೆಯ ಎಡಭಾಗದಲ್ಲಿ ನಿಂತಿತ್ತು. ಹಿಂಬದಿಯಿಂದ ಅತಿವೇಗವಾಗಿ ಬಂದ ಟಾಟಾ ಎಸ್ ಗೂಡ್ಸ್ ವಾಹನವು ಡಿಕ್ಕಿ ಹೊಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುತ್ತಿದ್ದಾರೆ.
