ಬೆಂಗಳೂರು: ಚಲಿಸುತ್ತಿದ್ದ ಮೆಟ್ರೋ ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.
ಯುವಕನನ್ನು 19 ವರ್ಷದ ಕಾನೂನು ವಿದ್ಯಾರ್ಥಿ ಧ್ರುವ ಎಂದು ಗುರುತಿಸಲಾಗಿದೆ.
ಗುರುವಾರ ಮಧ್ಯಾಹ್ನ 2:10ರ ಸುಮಾರಿಗೆ ಮೆಟ್ರೋ ಹಳಿಗೆ ವ್ಯಕ್ತಿ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ವ್ಯಕ್ತಿ ಹಳಿಗೆ ಧುಮುಕಿದ್ದು, ಮೆಟ್ರೊ ಆಡಳಿತ ಮಂಡಳಿ ಕೂಡಲೇ ಮೆಟ್ರೋ ರೈಲನ್ನು ನಿಲ್ಲಿಸಿದ್ದಾರೆ. ಬಳಿಕ ರೈಲ್ವೆ ಹಳಿಗೆ ಬಿದ್ದ ವಿದ್ಯಾರ್ಥಿಯ ಮೃತದೇಹವನ್ನು ಹೊರತೆಗೆಯಲು ಅಧಿಕಾರಿಗಳು ಹರಸಾಹಸ ಪಟ್ಟಿದ್ದಾರೆ.