ಸ್ಮಾರ್ಟ್ ಕಾರ್ಡ್ ಹೊಂದಿದ ಪ್ರಯಾಣಿಕರಿಗೆ ಮಾತ್ರ ಸಂಚಾರಿಸಲು ಅವಕಾಶ
ಬೆಂಗಳೂರು:
ನಮ್ಮ ಮೆಟ್ರೋ ಇದೇ ಸೋಮವಾರ ಜೂನ್ 21 ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಲಿದ್ದು, ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಸಂಚಾರ ಆರಂಭವಾಗಲಿದೆ.
ಬೆಳಗ್ಗೆ 7 ರಿಂದ ಮಧ್ಯಾಹ್ನ 11 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿ 5 ನಿಮಿಷಗಳ ಅಂತರದಲ್ಲಿ ಮೆಟ್ರೋ ಸಂಚಾರ ನಡೆಯಲಿದೆ. ಸ್ಮಾರ್ಟ್ ಕಾರ್ಡ್ ಹೊಂದಿದ ಪ್ರಯಾಣಿಕರಿಗೆ ಮಾತ್ರ ಸಂಚಾರಿಸಲು ಅವಕಾಶವಿದ್ದು, ನಿಲ್ದಾಣಗಳಲ್ಲೂ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಲು ಅವಕಾಶ ನೀಡಲಾಗುತ್ತದೆ.
ಇದನ್ನೂ ಓದಿ: ಸೋಮವಾರದಿಂದ ಬಸ್ ಮತ್ತು ಮೆಟ್ರೋಗೆ ಶೇ.50ರಷ್ಟು ಜನರೊಂದಿಗೆ ಸಂಚಾರಕ್ಕೆ ಅವಕಾಶ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ https://kannada.thebengalurulive.com/karnataka-allows-bus-and-metro-with-50-capacity-from-monday-chief-minister-bs-yediyurappa/


ನಿಲ್ದಾಣದಲ್ಲಿ ಪ್ರಯಾಣಿಕರು ಕೊವಿಡ್ ನಿಯಮಾವಳಿ ಪಾಲಿಸಬೇಕು. ಉಷ್ಣಾಂಶ ಚೆಕ್ ಮಾಡಿಕೊಂಡು, ಹ್ಯಾಂಡ್ ಸ್ಯಾನಿಟೈಜರ್ ಬಳಸಿ ನಿಲ್ದಾಣಕ್ಕೆ ಆಗಮಿಸಬೇಕು. ಮತ್ತು ಪ್ರಯಾಣಿಕರು ಫೇಸ್ ಮಾಸ್ಕ್ ಧರಿಸಿದರೆ ಮಾತ್ರ ನಿಲ್ದಾಣದೊಳಗೆ ಆಗಮಿಸಲು ಅವಕಾಶವಿದೆ. ರೈಲಿನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ.