Home ಬೆಂಗಳೂರು ನಗರ ಬಿಬಿಎಂಪಿ ಮುಖ್ಯ ಆಯುಕ್ತರು ರವರಿಂದ ಗಾಂಧಿನಗರ ಬಹುಮಹಡಿ ವಾಹನ ನಿಲುಗಡೆ ತಾಣದ ಕಾಮಗಾರಿ ಪರಿಶೀಲನೆ

ಬಿಬಿಎಂಪಿ ಮುಖ್ಯ ಆಯುಕ್ತರು ರವರಿಂದ ಗಾಂಧಿನಗರ ಬಹುಮಹಡಿ ವಾಹನ ನಿಲುಗಡೆ ತಾಣದ ಕಾಮಗಾರಿ ಪರಿಶೀಲನೆ

51
0
Bengaluru multi-level parking lot nearing completion

ಬೆಂಗಳೂರು:

ನಗರದ ಗಾಂಧಿನಗರ ವಾರ್ಡ್ ವ್ಯಾಪ್ತಿಯ ಸ್ವಾತಂತ್ರ್ಯ ಉದ್ಯಾನವನದ ಬಳಿ ನಿರ್ಮಿಸುತ್ತಿರುವ ಬಹುಮಹಡಿ ವಾಹನ ನಿಲುಗಡೆ (Multi level car parking-MLCP) ಕಾಮಗಾರಿಯನ್ನು ಇಂದು ಮುಖ್ಯ ಆಯುಕ್ತರಾದ ಗೌರವ್ ಗುಪ್ತ ರವರು ಹಾಗೂ ಸ್ಥಳೀಯ ಶಾಸಕರಾದ ದಿನೇಶ್ ಗುಂಡೂರಾವ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಹುಮಹಡಿ ವಾಹನ ನಿಲುಗಡೆ ತಾಣದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪಾರ್ಕಿಂಗ್ ವ್ಯವಸ್ಥೆಯ ಕಾಮಗಾರಿ ಈಗಾಗಲೇ ಮುಕ್ತಾಯವಾಗಿರುತ್ತದೆ. ಇನ್ನು ಕಟ್ಟಡದ ಮೇಲ್ಬಾಗ (ಪ್ರತಿಭಟನೆ ಮಾಡುವ ಸ್ಥಳ) ದಲ್ಲಿ ರೂಫ್ ಪ್ರಸ್ ಹಾಗೂ ಸೌರ ವಿದ್ಯುತ್ ಅಳವಡಿಕೆ ಕೆಲಸ ನಡೆಯುತ್ತಿದ್ದು, ಸಂಪೂರ್ಣ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಇಂಜಿನಿಯರ್ ಲೋಕೇಶ್ ರವರು ಮಾಹಿತಿ ನೀಡಿದರು. ಈ ವೇಳೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಪಾರ್ಕಿಂಗ್ ವ್ಯವಸ್ಥೆ ಕಾಮಗಾರಿಯು ಮುಕ್ತಾಯ ಹಂತದಲ್ಲಿರುವ ಪರಿಣಾಮ ಸೆಪ್ಟೆಂಬರ್ ತಿಂಗಳಾಂತ್ಯದ ವೇಳೆಗೆ ಪಾರ್ಕಿಂಗ್ ವ್ಯವಸ್ಥೆಯು ಸಾರ್ವಜನಿಕರಿಗೆ ದೊರಕುವಂತೆ ಎಲ್ಲಾ ವ್ಯವಸ್ಥೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯ ಇಂಜಿನಯರ್ ಲೋಕೇಶ್ ಮಾತನಾಡಿ, ಬಹುಮಹಡಿ ವಾಹನ ನಿಲುಗಡೆ ತಾಣವನ್ನು ನಗರೋತ್ಥಾನ ಗ್ರಾಂಟ್ಸ್ ಅಡಿ 79.81 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ತಳಭಾಗದಲ್ಲಿ ಮೂರು ಮಹಡಿಗಳನ್ನು ನಿರ್ಮಿಸಲಾಗಿದ್ದು(-1, -2, -3), 556 ಕಾರು, 445 ದಿಚಕ್ರ ಚಾಹನ ನಿಲುಗಡೆ ಮಾಡಬಹುದಾಗಿದೆ. ಆದರೆ, ಸ್ಥಳದಲ್ಲಿ ಬೃಹತ್ ಬಂಡೆ ಸಿಕ್ಕಿದ ಪರಿಣಾಮ ಕಾಮಗಾರಿ ವಿಳಂಬವಾಗಿದೆ ಎಂದರು.

ಕಟ್ಟಡದಲ್ಲಿ 4 ಲಿಫ್ಟ್ ಗಳು ಹಾಗೂ 40 ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಕಟ್ಟಡ ಮೇಲ್ಬಾಗದಲ್ಲಿ ಪ್ರತಿಭಟನೆ ಮಾಡಲು ಸ್ಥಳಾವಕಾಶ ಕಲ್ಪಿಸಲಾಗುತ್ತದೆ. ಪ್ರತಿಭಟನೆ ಸ್ಥಳದ ಮೇಲ್ಬಾಗದಲ್ಲಿ ರೂಫ್ ಹಾಗೂ ಸೌರ ವಿದ್ಯುತ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಅದಲ್ಲದೆ ವಿದ್ಯುತ್ ಅಳವಡಿಕೆ, ಅಗ್ನಿ ಶಾಮಕ ಅಳವಡಿಕೆ, ಕಾಂಪೋಡ್ ಗೋಡೆ ನಿರ್ಮಿಸುವ, ಪ್ರವೇಶ ದ್ವಾರ, ಪಾದಚಾರಿ ಕೆಲಸ ಸೇರಿದಂತೆ ಇನ್ನಿತರೆ ಕಾಮಗಾರಿ ಬಾಕಿಯಿದ್ದು, ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಬಹುಮಹಡಿಡಿ ನಿಲ್ದಾಣ ತಾಣ ಆಕರ್ಷಣಿಯವಾಗಿ ಕಾಣಲು ಕಟ್ಟಡವನ್ನು ಹಸಿರೀಕರಣ ಮಾಡಲಾಗುತ್ತದೆ. ಈ ಕಾಮಗಾರಿ ಪೂರ್ಣಗೊಂಡು ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಿದರೆ ಗಾಂಧಿನಗರ, ಮೆಜೆಸ್ಟಿಕ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿದ್ದ ಬಹುತೇಕ ಪಾರ್ಕಿಂಗ್ ಸಮಸ್ಯೆ ನಿವಾರಣೆಯಾಗಲಿದೆ.

ಪರಿಶೀಲನೆ ವೇಳೆ ಪಶ್ಚಿಮ ವಲಯ ಜಂಟಿ ಆಯುಕ್ತರು ಶಿವಸ್ವಾಮಿ, ಕಾರ್ಯಪಾಲಕ ಇಂಜಿನಿಯರ್ ಫಥೆ ಅಹ್ಮದ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here